ಬೆಂಗಳೂರು: ಬೆಂಗಳೂರಿನ ಛಲ್ಲಘಟ್ಟ ಹಾಗೂ ಭೀಮನಕುಪ್ಪೆಯ ಕೆಂಪೇಗೌಡ ಬಡಾವಣೆ ಸಮೀಪ ಸ್ಕೈಡೆಕ್ ನಿರ್ಮಾಣದ ಸ್ಥಳ ಪರಿಶೀಲನೆ ಹಾಗೂ ರಸ್ತೆ ಕಾಮಗಾರಿಯನ್ನ ಉಪಮುಖ್ಯಮಂತ್ರಿಯ ಡಿ.ಕೆ.ಶಿವಕುಮಾರ್ ಅವರು ಪರಿಶೀಲಿಸಿದರು.
ಬೆಂಗಳೂರು ಸ್ಕೈಡೆಕ್ ನಗರದ ಪ್ರಮುಖ ಆಕರ್ಷಣೆ ಆಗಲಿದ್ದು, ಬೆಂಗಳೂರಿನ ವಿಹಂಗಮ ನೋಟವನ್ನು ನೀಡಿ ಪ್ರವಾಸೋದ್ಯಮವನ್ನು ಉತ್ತೇಜಿಸುವುದರ ಜೊತೆಗೆ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ ಎಂದರು. ಇದನ್ನೂ ಓದಿ: ಬೆಳೆಪರಿಹಾರದಿಂದ ರೈತರು ತುಸು ನೆಮ್ಮದಿ ಕಾಣುವಂತಾಗಿದೆ: ಸಿಎಂ
ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್ ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
