Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗಬೇಕು: ಡಾ. ಶರಣಪ್ರಕಾಶ್‌ ಪಾಟೀಲ್‌
  • Bangalore
  • Politics
  • State

ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗಬೇಕು: ಡಾ. ಶರಣಪ್ರಕಾಶ್‌ ಪಾಟೀಲ್‌

Praja Vahini January 2, 2026 1 minute read
WhatsApp Image 2026-01-02 at 18.37.42
Spread the love

ಬೆಂಗಳೂರು: ನಾಯಕತ್ವ ಎನ್ನುವುದು ವಿದ್ಯಾರ್ಥಿ ದಿಸೆಯಿಂದಲೇ ಆರಂಭವಾಗುತ್ತದೆ. ಅನೇಕ ನಾಯಕರು ಕಾಲೇಜು ಹಂತದಿಂದಲೇ ಬೆಳದುಬಂದಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜು ಹಂತದಲ್ಲಿ ಚುನಾವಣೆ ಮಾಡುವ ಇಚ್ಛೆ ಇದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಕಾರ್ಯಕ್ರಮ ಒಂದರಲ್ಲಿಇಂದು (ಶುಕ್ರವಾರ ಜ. 02) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿಯ ಸಂಚಾಲಕರೂ ಆಗಿರುವ ಸಚಿವ ಡಾ. ಪಾಟೀಲ್‌, ಜನವರಿ 13ಕ್ಕೆ ಈ ಸಮಿತಿಯ ಮೊದಲ ಸಭೆ ಮಾಡಲಿದ್ದೇವೆ ಎಂದರು.

ಕಾಲೇಜುಗಳಲ್ಲಿ ಚುನಾವಣೆ ನಡೆಸುವ ಸಂಬಂಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಇತ್ತೀಚೆಗೆ ಸಮಿತಿ ರಚಿಸಿ, ಡಾ. ಶರಣಪ್ರಕಾಶ್‌ ಪಾಟೀಲ್‌ ಅವರನ್ನು ಸಂಚಾಲಕರನ್ನಾಗಿ ನೇಮಿಸಿದ್ದಾರೆ. ಚುನಾವಣೆ ರೂಪುರೇಷೆ ಕುರಿತು ಸಭೆಯಲ್ಲಿ ಚರ್ಚಿಸುತ್ತೇವೆ. ಸಮಿತಿ ಸಭೆಯಲ್ಲಿ ನಿರ್ಧರಿಸಿದ ವಿಷಯಗಳ ಕುರಿತು ವರದಿ ಮಾಡಿ ಕೆಪಿಸಿಸಿ ಅಧ್ಯಕ್ಷರಿಗೆ ಸಲ್ಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸ್ಕೈಡೆಕ್ ನಿರ್ಮಾಣದ ಸ್ಥಳ ಪರಿಶೀಲಿಸಿದ ಡಿಸಿಎಂ

ಕೆಪಿಸಿಸಿ ಅಧ್ಯಕ್ಷರು ನೇಮಿಸಿರುವ ಸಮಿತಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮುಖ್ಯ ಸಚೇತಕ ಸಲೀಂ ಅಹಮದ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬಿ. ಶಿವಣ್ಣ, ವಿಧಾನ ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಬಸವನಗೌಡ ಬಾದರ್ಲಿ ಹಾಗೂ ಎಚ್‌.ಎಸ್. ಮಂಜುನಾಥ್‌ ಗೌಡ, ಕೀರ್ತಿ ಗಣೇಶ್‌ ಈ ಸಮಿತಿಯಲ್ಲಿ ಇದ್ದಾರೆ.

ಕಾಲೇಜುಗಳಲ್ಲಿ ಋತುಚಕ್ರ ರಜೆ-ಸಿಎಂ ಆದೇಶ ಅಂತಿಮ

ಕಾಲೇಜು ವಿದ್ಯಾರ್ಥಿನಿಯಯರು, ವಿವಿ ವಿದ್ಯಾರ್ಥಿನಿಯರಿಗೆ ಋತುಚಕ್ರ ರಜೆ ಕೊಡುವ ಬಗ್ಗೆ ಸಿಎಂ ಸೂಚನೆ ಕೊಟ್ಟರೆ ಮಾಡುತ್ತೇವೆ. ಸಿಎಂ ಆದೇಶವೇ ಅಂತಿಮ ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಎಂಜಿನಿಯರ್ ಮತ್ತು ಮೆಡಿಕಲ್ ಸೀಟು ಶುಲ್ಕ ಹೆಚ್ಚಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಸ್ಕೈಡೆಕ್ ನಿರ್ಮಾಣದ ಸ್ಥಳ ಪರಿಶೀಲಿಸಿದ ಡಿಸಿಎಂ
Next: ಬಿಜೆಪಿಯವರು ರಿಪಬ್ಲಿಕ್ ಆಫ್ ಬಳ್ಳಾರಿ ಅನ್ಕೊಂಡಿದ್ದಾರೆ: ಬಿ. ನಾಗೇಂದ್ರ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.