Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಸಿಎಂ ಆಕ್ರೋಶ
  • Bangalore
  • Politics
  • State

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಸಿಎಂ ಆಕ್ರೋಶ

Praja Vahini January 3, 2026 1 minute read
WhatsApp Image 2026-01-03 at 16.55.46
Spread the love

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು (ಶನಿವಾರ ಜ. 03) ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದರು.

ಮನಮೋಹನ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು.

ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ. ಸುಮಾರು 12.16 ಕೋಟಿ ನರೇಗಾ ಕಾರ್ಮಿಕರು ದೇಶದಲ್ಲಿದ್ದಾರೆ. ಅದರಲ್ಲಿ 6.21 ಕೋಟಿ ಮಹಿಳೆಯರು ಇದ್ದಾರೆ. ಪ.ಜಾತಿಯವರು ಶೇ.17, ಪ.ವರ್ಗ ಶೇ. 11 ಇದ್ದಾರೆ.

ನಮ್ಮ ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 36.75 ಲಕ್ಷ ಮಹಿಳೆಯರು, ಅಂದರೆ ಶೇ. 51.6 ಮಹಿಳೆಯರಿದ್ದಾರೆ ಎಂದು ವಿವರಿಸಿದರು.

ಮನಮೋಹನ್ ಸಿಂಗ್ ಅವರ ಜನಪರ ಕಾಯ್ದೆಯನ್ನು ಹಿಂಪಡೆದುಕೊಳ್ಳುವ ಮೂಲಕ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ.‌

ನರೇಗಾ ಕಾಯ್ದೆ ಪ್ರಕಾರ ಜನಸಾಮಾನ್ಯರು, ಕೂಲಿ ಕಾರ್ಮಿಕರು, ಕೃಷಿ ಕಾರ್ಯಗಳ ಜೊತೆಯಲ್ಲಿ ತಾವಿದ್ದ ಸ್ಥಳದಲ್ಲೇ ನರೇಗಾ ಅಡಿ ಕೂಲಿ ಕೆಲಸ ಮಾಡಲು ಅವಕಾಶವಿತ್ತು. ಆ ಮೂಲಕ ಹಳ್ಳಿಗಾಡಿನ ಆರ್ಥಿಕತೆ ಕಟ್ಟಲು ಸಾಧ್ಯವಾಗಿತ್ತು. ಸ್ಥಳೀಯವಾಗಿ ಆಸ್ತಿ ಸೃಜನೆಯಾಗುತ್ತಿತ್ತು. ಉದ್ಯೋಗ ಕೇಳಿ ಪಡೆಯುವ ಹಕ್ಕು ಜನರಿಗಿತ್ತು. ಈಗ ಇದ್ಯಾವುದೂ ಇಲ್ಲವಾಗಿದೆ ಎಂದರು.‌

ಕಳೆದ 11 ವರ್ಷಗಳ ಕೇಂದ್ರ ಸರ್ಕಾರದ ಸಾಧನೆ ಅಂದರೆ ಯೋಜನೆಗಳ ಹೆಸರು ಬದಲಾಯಿಸಿರುವುದು ಮಾತ್ರ. ಹಿಂದೆ ಜಾರಿಯಲ್ಲಿದ್ದ ಸುಮಾರು 30 ಯೋಜನೆಗಳ ಹೆಸರು ಬದಲಾವಣೆ ಅಥವಾ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವನ್ನು ಮೋದಿ ಸರ್ಕಾರ ಮಾಡಿದೆ.

ಪ್ರಸ್ತುತ  ಕಾಯ್ದೆಯಡಿ 100 ದಿನ ಕನಿಷ್ಟ ಕೆಲಸ ನೀಡಬೇಕಾಗಿತ್ತು.  ಅವರು ಎಲ್ಲಿ ವಾಸಿಸುತ್ತಾರೋ ಅಲ್ಲಿಯೇ ಕೆಲಸ ನೀಡಬೇಕಾಗಿತ್ತು. ಈಗ ಹೊಸ ಕಾಯ್ದೆ ಸೆಕ್ಷನ್ 5(1) ಪ್ರಕಾರ ಸರ್ಕಾರ ಅಧಿಸೂಚಿತ ಪ್ರದೇಶದಲ್ಲಿ ಮಾತ್ರ ಉದ್ಯೋಗ ನೀಡಲಾಗುತ್ತದೆ.  ಉದ್ಯೋಗ ದೊರೆಯುವ ಬಗ್ಗೆ ಯಾವುದೇ ಗ್ರಾಮ ಪಂಚಾಯತ್ ಗಳಿಗೂ ಖಾತ್ರಿಯಿರುವುದಿಲ್ಲ‌ ಎಂದರು.

ವರ್ಷದ ಯಾವುದೇ ಅವಧಿಯಲ್ಲಿ ಲಭ್ಯವಾಗುತ್ತಿದ್ದ ಕೂಲಿ ಕೆಲಸವನ್ನು ಈಗ ನಿರ್ಬಂಧಿಸಲಾಗಿದ್ದು, ಕೃಷಿ ಚಟುವಟಿಕೆ ಅವಧಿಯ 60 ದಿನ ಯೋಜನೆಯಡಿ ಯಾವುದೇ ಉದ್ಯೋಗ ನೀಡಲಾಗುವುದಿಲ್ಲ. ಹಣದುಬ್ಬರಕ್ಕೆ ತಕ್ಕಂತೆ ಕೂಲಿ ಹಣವನ್ನು ಸರಿದೂಗಿಸುವ ಅವಕಾಶವನ್ನು ತೆಗೆದು ಹಾಕಲಾಗಿದೆ. ಇದನ್ನೂ ಓದಿ: ಅಥಣಿ ಬ್ರೇಕಿಂಗ್; ಮಾಜಿ ಡಿಸಿಎಂ ಮತ್ತು ಮಗನಿಂದ ಹಲ್ಲೆ

ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಅಥಣಿ ಬ್ರೇಕಿಂಗ್; ಮಾಜಿ ಡಿಸಿಎಂ ಮತ್ತು ಮಗನಿಂದ ಹಲ್ಲೆ
Next: ಬಿಜೆಪಿಯವರಿಗೆ ಗಾಂಧೀಜಿ ಫೋಟೋ ಬಳಸುವ ಯೋಗ್ಯತೆ ಇಲ್ಲ: ಡಿಕೆಶಿ

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.