Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಚ್.ಎಂ.ರೇವಣ್ಣ ಅವರು ಉತ್ತಮ ಮಾಹಿತಿ ಸಂಗ್ರಹಿಸಿ ತಂದಿದ್ದಾರೆ: ಡಿಸಿಎಂ
  • Bangalore
  • Front news
  • Politics
  • State

ಎಚ್.ಎಂ.ರೇವಣ್ಣ ಅವರು ಉತ್ತಮ ಮಾಹಿತಿ ಸಂಗ್ರಹಿಸಿ ತಂದಿದ್ದಾರೆ: ಡಿಸಿಎಂ

Praja Vahini January 4, 2026 1 minute read
64481a20-1f42-469d-b120-fa98904fc20b
Spread the love

 

 

ಬೆಂಗಳೂರು: “ಬಳ್ಳಾರಿ ಗಲಭೆ ಬಗ್ಗೆ ಎಚ್.ಎಂ.ರೇವಣ್ಣ ಅವರು ಒಳ್ಳೆಯ ಮಾಹಿತಿಗಳನ್ನು ಪಡೆದುಕೊಂಡು ಬಂದಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಅರಮನೆ ಮೈದಾನದ ಬಳಿ ಮಾಧ್ಯಮಗಳಿಗೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಬಳ್ಳಾರಿ ಗಲಭೆ ಕುರಿತಾಗಿ ಎಚ್.ಎಂ.ರೇವಣ್ಣ ಅವರ ಸಮಿತಿ ವರದಿ ನೀಡಿದೆಯೇ ಎಂದಾಗ, “ಅಧಿಕೃತ ಹಾಗೂ ಅನಧಿಕೃತ ವಿಚಾರಗಳನ್ನು ಭೇಟಿ ಮಾಡಿ ತಿಳಿಸಿದ್ದಾರೆ” ಎಂದರು.

ವಾಲ್ಮೀಕಿ ಮಹರ್ಷಿ ಎಲ್ಲಾ ಸಮುದಾಯಕ್ಕೆ ಸೇರಿದವರು

“ಎಲ್ಲಾ ಕಡೆಯೂ ಪ್ರತಿಮೆಗಳನ್ನು ಇಡುತ್ತಾರೆ. ಇದಕ್ಕೆ ಅಸೂಯೆ ಏಕೆ ಪಡಬೇಕು. ವಾಲ್ಮೀಕಿ ಮಹರ್ಷಿಯವರು ಒಂದು ಸಮುದಾಯಕ್ಕೆ ಸೇರಿದವರೇ? ಅವರು ಎಲ್ಲಾ ಸಮುದಾಯದ ಆಸ್ತಿ. ಅವರು ಬರೆದಿರುವ ರಾಮಯಣವನ್ನು ಎಲ್ಲರೂ ಓದುವುದಿಲ್ಲವೇ?. ಹೀಗಿರುವಾಗ ಅವರ ಬ್ಯಾನರ್ ಹಾಕಲು ಜನಾರ್ಧನ ರೆಡ್ಡಿ ಆಕ್ಷೇಪ ವ್ಯಕ್ತಪಡಿಸಿದ್ದು ಸರಿಯಲ್ಲ” ಎಂದರು.

ಜಡ್ ಪ್ಲಸ್ ಸೆಕ್ಯುರಿಟಿ ನೀಡಿ ಎಂದು ಜನಾರ್ದನ ರೆಡ್ಡಿ ಅವರು ಪತ್ರ ಬರೆದಿರುವ ಬಗ್ಗೆ ಕೇಳಿದಾಗ, “ಜಡ್ ಆದರೂ ಕೇಳಲಿ. ಇರಾನ್, ಅಮೆರಿಕಾದಿಂದಾದರೂ ಸೆಕ್ಯುರಿಟಿ ತೆಗೆದುಕೊಂಡು ಬರಲಿ.‌ ಇವರು ಯಾರನ್ನಾದರೂ ನೇಮಿಸಿಕೊಳ್ಳಲಿ. ಬೇಡ ಎಂದವರು ಯಾರು” ಎಂದು ತಿರುಗೇಟು ನೀಡಿದರು.

ರೆಡ್ಡಿ ಅವರಿಗೆ ರಕ್ಷಣೆ ನೀಡಬೇಕು ಎಂದು ಸೋಮಣ್ಣ ಅವರು ಸಹ ದನಿಗೂಡಿಸಿರುವ ಬಗ್ಗೆ ಕೇಳಿದಾಗ, “ಅವರ ಪಕ್ಷದ ಕೇಡರ್ಸ್ ನೂರು ಮಂದಿಯನ್ನು ಅವರು ತಯಾರಿ ಮಾಡಿಕೊಳ್ಳಲಿ” ಎಂದರು.

ಬಳ್ಳಾರಿ ಗಲಭೆಯ ತನಿಖೆಯನ್ನು ಸಿಐಡಿ ಅಥವಾ ಎಸ್ ಐಟಿಗೆ ನೀಡುವ ಆಲೋಚನೆ ಇದೆಯೇ ಎಂದು ಕೇಳಿದಾಗ, “ಇದರ ಬಗ್ಗೆ ಮುಖ್ಯಮಂತ್ರಿಯವರು ಹಾಗೂ ಗೃಹ ಸಚಿವರು ತೀರ್ಮಾನ ಮಾಡುತ್ತಾರೆ. ಈ ಬಗ್ಗೆ ಯಾವ ಚರ್ಚೆಯೂ ನನಗೆ ಗೊತ್ತಿಲ್ಲ” ಎಂದರು.

ಗುಂಡು ಸತೀಶ್ ರೆಡ್ಡಿ ಅವರ ಗನ್ ಮ್ಯಾನ್ ದು ಎನ್ನುವ ವರದಿ ಬಗ್ಗೆ ಕೇಳಿದಾಗ, “ಯಾರದ್ದೇ ಆಗಿದ್ದರು ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ವರದಿ ಬಗ್ಗೆ ನನಗೆ ಗೊತ್ತಿಲ್ಲ” ಎಂದರು.

About the Author

Praja Vahini

Editor

View All Posts

Spread the love

Post navigation

Previous: ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ- ಸಮುದಾಯಕ್ಕೆ ಸಿಎಂ ಕರೆ
Next: ಬೆಂಗಳೂರು ನಗರದ ಮೂಲಸೌಕರ್ಯಕ್ಕೆ ನಮ್ಮ ಸರ್ಕಾರದಿಂದ 1.50 ಲಕ್ಷ ಕೋಟಿ ವೆಚ್ಚ: ಡಿಸಿಎಂ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.