Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿವೈವಿ
  • Bangalore
  • Politics
  • State

ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿವೈವಿ

Praja Vahini January 5, 2026 1 minute read
611807647_1520599999423945_4371797243523315972_n
Spread the love

ಬೆಂಗಳೂರು: ಪ್ರತಿಭಟನೆಗೆ ವೇದಿಕೆ ಹಾಕಲು ಅವಕಾಶ ಕೊಡುವುದಿಲ್ಲ; ಇದೇನು ಇವರ ಅಪ್ಪನ ಮನೆಯ ಸರಕಾರವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ.

“ಕೋಗಿಲು ಉಳಿಸಿ ಅಕ್ರಮ ವಲಸಿಗರನ್ನು ತೊಲಗಿಸಿ” ಎನ್ನುವ ಘೋಷವಾಕ್ಯದೊಂದಿಗೆ ಇಂದು (ಸೋಮವಾರ ಜ. 05) ಬಾಗಲೂರು ಮುಖ್ಯ ರಸ್ತೆಯ ಕೌಂಟ್ರಿ ಕ್ಲಬ್ ಹತ್ತಿರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ. ಇಂಥ ಗೊಡ್ಡು ಬೆದರಿಕೆಗೆ ಹೆದರುವವರು ಬಿಜೆಪಿ ಕಾರ್ಯಕರ್ತರಲ್ಲ; ಇದನ್ನು ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಅರ್ಥ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಮನೆ ಕೆಡವಿದ್ದೇ ಕಾಂಗ್ರೆಸ್ ಸರಕಾರ. ಆದರೆ, ಕೆ.ಸಿ.ವೇಣುಗೋಪಾಲ್ ಅವರು ಬೆದರಿಸಿದ ತಕ್ಷಣ ಸಿದ್ದರಾಮಯ್ಯನವರು ತಮ್ಮ ಸಿಎಂ ಕುರ್ಚಿ ಕಳಕೊಳ್ಳುವ ಭೀತಿಯಿಂದ ಅಕ್ರಮ ವಲಸಿಗರಿಗೆ ಮನೆ ಕೊಡಲು ರಾಜ್ಯ ಸರಕಾರ ಮುಂದಾಗಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಕುರ್ಚಿ ಕಸಿದುಕೊಳ್ಳಬೇಕೆಂಬ ಕಾರಣಕ್ಕಾಗಿ ಕೆ.ಸಿ.ವೇಣುಗೋಪಾಲ್ ಮೂಲಕ ಸಿಎಂಗೆ ಧಮ್ಕಿ ಹಾಕಿಸಿ ಅವರೂ ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ ಎಂದು ಟೀಕಿಸಿದರು.

ಕೆ.ಸಿ.ವೇಣುಗೋಪಾಲ್ ಕರ್ನಾಟಕದ ಮುಖ್ಯಮಂತ್ರಿಯೇ? ಅಥವಾ ಸಿದ್ದರಾಮಯ್ಯ ಮುಖ್ಯಮಂತ್ರಿಯೇ ಎಂದು ಕರ್ನಾಟಕದ ಜನರು ಪ್ರಶ್ನಿಸುತ್ತಿದ್ದಾರೆ ಎಂದು ನುಡಿದರು. ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ರಾಜ್ಯದಲ್ಲಿ 38 ಲಕ್ಷ ಜನರು ಮನೆಗಾಗಿ ಅರ್ಜಿ ಹಾಕಿದ್ದಾರೆ. ಡಾ. ಅಂಬೇಡ್ಕರ್ ಅವರ ಹೆಸರು ಹೇಳುವ ಮುಖ್ಯಮಂತ್ರಿಗಳು ಕಳೆದ ಎರಡೂವರೆ ವರ್ಷದಲ್ಲಿ ಕಾಂಗ್ರೆಸ್ ಸರಕಾರವು ಒಂದೇ ಒಂದು ಮನೆ ಕೊಟ್ಟಿಲ್ಲ ಎಂದು ದೂರಿದರು.

ಅಕ್ರಮ ವಲಸಿಗರಿಗೆ ಮನೆ ಕೊಡಲು ಹೊರಟದ್ದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪಿಸಿದರು. ಬಿಜೆಪಿ ಇದನ್ನು ಬಲವಾಗಿ ಖಂಡಿಸುತ್ತದೆ. ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಕೋಗಿಲು ಅಕ್ರಮವಾಸಿಗಳಿಗೆ ಅಯೋಗ್ಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ನಲ್ಲಿ ನೀರಿನ ಸಂಪರ್ಕ, ವಿದ್ಯುತ್ ಸಂಪರ್ಕ ನೀಡಿದ್ದಾರೆ. ತಿಂಗಳಿಗೆ 2-3 ಲಕ್ಷ ಲಂಚ ವಸೂಲಿ ಮಾಡುತ್ತಿದ್ದರು ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಕಾರ್ಯಕರ್ತರು ಲಂಚ ಪಡೆದು ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಹಿಂದುಳಿದ ವರ್ಗಗಳ ಸಹಾಯವಿಲ್ಲದೆ ಸಮಾಜ ಮುನ್ನಡೆಯದು: ಡಿಸಿಎಂ ಡಿ.ಕೆ. ಶಿವಕುಮಾರ್

ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರು ಮಾತೆತ್ತಿದರೆ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಹೆಸರು ಹೇಳುತ್ತಾರೆ. ಇವರ ಅಂಥ ದಲಿತರಿಗೆ ಅನ್ಯಾಯ ಮಾಡಲು ಹೊರಟಿದ್ದಾರಲ್ಲವೇ ಎಂದು ಕೇಳಿದರು. ರಾಜ್ಯದ ತೆರಿಗೆದಾರರ ಹಣದಲ್ಲಿ ಕಟ್ಟಿದ ಮನೆಗಳನ್ನು ಅಕ್ರಮವಾಗಿ ನೆಲೆಸಿದವರಿಗೆ ಅಕ್ರಮವಾಗಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ದೂರಿದರು. ರಾಜ್ಯದಲ್ಲಿ ನಮ್ಮ ಹೋರಾಟ ನಡೆಯಲಿದೆ ಎಂದು ಪ್ರಕಟಿಸಿದರು. ಸತ್ಯಕ್ಕೆ ಜಯ ಸಿಗಲಿದೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಹಿಂದುಳಿದ ವರ್ಗಗಳ ಸಹಾಯವಿಲ್ಲದೆ ಸಮಾಜ ಮುನ್ನಡೆಯದು: ಡಿಸಿಎಂ ಡಿ.ಕೆ. ಶಿವಕುಮಾರ್
Next: ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿಎಂ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.