ಮುಂಬೈ: ಹಿರಿಯ ಪರಿಸರ ವಿಜ್ಞಾನಿ ಪರಿಸರವಾದಿ ಮತ್ತು ಬರಹಗಾರ ಡಾ. ಮಾಧವ ಗಾಡ್ಗೀಳ್ (83) ನಿನ್ನೆ (ಬುಧವಾರ ಜ. 07) ರಾತ್ರಿ ಪುಣೆಯಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
ಮಾಧವ ಗಾಡ್ಗೀಳ್ ಅವರು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹಾ ಮಂಡಳಿಯ ಮಾಜಿ ಸದಸ್ಯರಾಗಿದ್ದರು ಮತ್ತು 2010 ರ ಪಶ್ಚಿಮ ಘಟ್ಟಗಳ ಪರಿಸರ ವಿಜ್ಞಾನ ತಜ್ಞರ ಸಮಿತಿ ಮುಖ್ಯಸ್ಥರಾಗಿದ್ದರು. ಇವರು ಅಧ್ಯಯನ ನಡೆಸಿ ತಯಾರಿಸಿದ್ದ ವರದಿಯನ್ನು ಗಾಡ್ಗೀಳ್ ಆಯೋಗದ ವರದಿ ಎಂದೇ ಕರೆಯಲಾಗುತ್ತಿತ್ತು. ಇದನ್ನೂ ಓದಿ: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ
ಡಾ. ಗಾಡ್ಗೀಳ್ ಅವರು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (NCERT) ಸದಸ್ಯರಾಗಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (NTCA) ಸದಸ್ಯರಾಗಿ ಮತ್ತು ರಾಷ್ಟ್ರೀಯ ಸಲಹಾ ಮಂಡಳಿಯ (NAC) ದಸ್ಯರಾಗಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
