ಬೆಂಗಳೂರು: ಹುಬ್ಬಳ್ಳಿ, ಧಾರವಾಡ ಅವಳಿ ನಗರದಲ್ಲಿ ಒಂದಲ್ಲ ಒಂದು ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದಕ್ಕೆ ಉದಾಹರಣೆ ಎಂಬಂತೆ ಇದೀಗ ಹುಬ್ಬಳ್ಳಿ ನಗರದಲ್ಲಿ ಬಿಜೆಪಿಯ ಕಾರ್ಯಕರ್ತೆಯ ಮೇಲೆ ಹಲ್ಲೆ ಹಾಗೂ ವಿವಸ್ತ್ರ ಆರೋಪ ಕೇಳಿ ಬಂದಿದೆ.
ಇನ್ನು ಈ ಕುರಿತು ಇದೀಗ ಗೃಹ ಸಚಿವ ಜಿ ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾವು ಹುಬ್ಬಳ್ಳಿ ಪೊಲೀಸ್ ಕಮಿಷನರ್ ಗೆ ತನಿಖೆಗೆ ಮಾಡಲು ಸ್ಪಷ್ಟವಾಗಿ ಮಾಹಿತಿ ನೀಡಿದ್ದೇವೆ ಎಂದು ಹೇಳಿದ್ದಾರೆ.
ನಗರದಲ್ಲಿಂದು (ಗುರುವಾರ ಜ. 08) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಬ್ಬ ಪೊಲೀಸ್ ಕಮಿಷನರ್ ಪ್ರಕರಣದ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ ಬಳಿಕ ಇನ್ನೇನು ಅನುಮಾನಕ್ಕೆ ಅವಕಾಶ ಇದೆ? ಪೊಲೀಸರು ಆಕೆಯನ್ನು ವಿವಸ್ತ್ರ ಮಾಡಿಲ್ಲ. ಆಕೆಯೇ ಸ್ವಯಂವಾಗಿ ಬಟ್ಟೆ ತೆಗೆದುಕೊಂಡಿದ್ದಾಳೆ ಎಂದು ಕಮಿಷನರ್ ಹೇಳಿದ್ದಾರೆ ಎಂದು ಗೃಹ ಸಚಿವರು ತಿಳಿಸಿದರು. ಇದನ್ನೂ ಓದಿ: ಕುಮಾರಸ್ವಾಮಿ ಅವರಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಕೆಶಿ
ಈ ವಿಷಯದಲ್ಲಿ ಬಿಜೆಪಿಯವರು ಅನಗತ್ಯ ರಾಜಕೀಯ ಮಾಡಬಾರದು ಎಂದು ಪರಮೇಶ್ವರ್ ಹೇಳಿದರು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೇ ವಿವರವಾಗಿ ಸ್ಪಷ್ಟನೆ ನೀಡಿರುವಾಗ, ಮತ್ತೆ ಇದನ್ನು ರಾಜಕೀಯ ವಿಚಾರವನ್ನಾಗಿ ಮಾಡುವುದು ಸರಿಯಲ್ಲ. ಸತ್ಯ ಹೊರಬರಬೇಕು, ಆದರೆ ಅದನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಬಾರದು ಎಂದು ಹೇಳಿದರು.
