ಬೆಂಗಳೂರು: ತಮ್ಮ ನಟನೆಯ ಜೀವನದಲ್ಲಿ ಹಲವಾರು ವಿಭಿನ್ನ ಪಾತ್ರಗಳಲ್ಲಿ ನಟಿಸಿ ಸಹಿ ಎನಿಸಿಕೊಂಡ ಹಿರಿಯ ನಟಿ ಜಯಮಾಲಾ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ ಒಲಿದು ಬಂದಿದೆ.
ಹೌದು, ಕರ್ನಾಟಕ ಸರ್ಕಾರದ 2020 ಹಾಗೂ 2021 ನೇ ಸಾಲಿನ ಸಿನಿಮಾ ಕ್ಷೇತ್ರದ ಜೀವಮಾನ ಸಾಧನೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಿರಿಯ ನಟಿ ಡಾ. ಜಯಮಾಲಾ ಅವರು ಡಾ. ರಾಜ್ಕುಮಾರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದನ್ನೂ ಓದಿ: ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್: 6 ಆರೋಪಿಗಳ ವಿರುದ್ಧ ಚಾರ್ಜ್ಶೀಟ್
ಪುಟ್ಟಣ್ಣ ಕಣಗಾಲ್ ಹಾಗೂ ಡಾ. ವಿಷ್ಣುವರ್ಧನ್ ಪ್ರಶಸ್ತಿಯನ್ನು ಸಹ ಘೋಷಿಸಲಾಗಿದೆ. ಈ ಎಲ್ಲ ಪ್ರಶಸ್ತಿಗಳು 5 ಲಕ್ಷ ರೂಪಾಯಿ ನಗದು ಹಾಗೂ 50 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿವೆ.
