ಕಲಬುರಗಿ: ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಮುಕ್ತಶ್ರಯದಲ್ಲಿ ಇಂದು (ಸೋಮವಾರ ಜ. ೧೨) ಸ ಕೆಪಿಎಸ್ ಶಾಲಾ ಆವರಣ ಯಡ್ರಾಮಿ ಯಲ್ಲಿ ಆಯೋಜಿಸಲಾಗಿದ್ದ ಪ್ರಜಾಸೌಧ ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಇಲಾಖೆಗಳ ಕಾರ್ಯಕ್ರಮ ಗಳಿಗೆ ಶಂಕುಸ್ಥಾಪನೆ ನೆರೆವೇರಿಸಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಿ ಮಾತನಾಡಿದರು.
ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ 87 ಕಾಮಗಾರಿಗಳ ಕಾಮಗಾರಿಗಳನ್ನು 867.49 ಕೋಟಿ ವೆಚ್ಚದ , 38.29 ಕೋಟಿ ವೆಚ್ಚ ಕಾಮಗಾರಿಗಳಿಗೆ ಉದ್ಘಾಟನೆ ಮಾಡಲಾಗಿದೆ. ಒಟ್ಟಾರೆ 906 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು
ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಹೇಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ 906 ಕೋಟಿ ಗಳನ್ನು ವೆಚ್ಚ ಮಾಡಲಾಗುತ್ತಿರಲಿಲ್ಲ ಎಂದರು.
ಕೊಟ್ಟ ಮಾತಿನಂತೆ ನಡೆದುಕೊಳ್ಳುವ ಸರ್ಕಾರ
1 ಲಕ್ಷದ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ವೆಚ್ಚ ಮಾಡಲಾಗಿದೆ.ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು. ಇದನ್ನೂ ಓದಿ: ಶಹಾಪುರ ಠಾಣೆಯಲ್ಲಿ ಸಾರ್ವಜನಿಕ ಶಾಂತಿ ಸಭೆ ನಡೆಯಿತು..
ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ 592 ಭರವಸೆಗಳನ್ನು ನೀಡಲಾಗಿತ್ತು. 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಮಿಕ್ಕ ಭರವಸೆಗಳನ್ನು ಈಡೇರಿಸಲಾಗುವುದು ಎಂದರು.
ಕಳೆದ ಬಾರಿ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಾಣಾಳಿಕೆಯಲ್ಲಿ ಸೇರಿರದ 30 ಕಾರ್ಯಕ್ರಮಗಳನ್ನು ಜಾರಿ ಮಾಡಲಾಗಿತ್ತು. ಎರಡೂವರೆ ವರ್ಷದಲ್ಲಿ ಕೊಟ್ಟ ಎಲ್ಲಾ ಭರವಸೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಲಾಗಿದೆ ಎಂದರು.
ಬಿಜೆಪಿ 2018 ರಿಂದ ಅಧಿಕಾರದಲ್ಲಿದ್ದು, ಅವರು ನೀಡಿದ್ದ 600 ಭರವಸೆಗಳಲ್ಲಿ 10% ಭರವಸೆಗಳನ್ನು ಈಡೇರಿಸಲಾಗಲಿಲ್ಲ ಎಂದು ತಿಳಿಸಿದರು.
49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧ ಮಂಜೂರು
ರಾಜ್ಯದಲ್ಲಿ 63 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. 2018 ರಿಂದ 2023 ರವರೆಗೆ ನೂತನ ತಾಲ್ಲೂಕುಗಳಿಗೆ ಬಿಜೆಪಿ ಸೌಲಭ್ಯ ಒದಗಿಸಿದ್ದು ಕೇವಲ 14 ತಾಲ್ಲೂಕುಗಳಲ್ಲಿ ಮಾತ್ರ ಮಾಡಿದರು. 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧಗಳನ್ನು ಮಂಜೂರು ನಮ್ಮ ಸರ್ಕಾರ ಮಾಡಿದ್ದು, ನಿರ್ಮಾಣ ಮಾಡಲಾಗುವುದು ಎಂದರು.
ಬಿಜೆಪಿ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ 19 ತಾಲ್ಲೂಕುಗಳು ಮಂಜೂರಾಗಿದ್ದರೆ, ಕೇವಲ ಎರಡು ಕಟ್ಟಡ ಮಾತ್ರ ನಿರ್ಮಾಣವಾಗಿದೆ. ನಮ್ಮ ಸರ್ಕಾರ 17 ತಾಲ್ಲೂಕುಗಳು ಮಂಜೂರಾಗಿದ್ದು,97 ನಾಡ ಕಚೇರಿಗಳು ಮಂಜೂರಾಗಿವೆ. ಕಲ್ಯಾಣ ಕರ್ನಾಟಕದಲ್ಲಿ 39 ಕಚೇರಿಗಳನ್ನು ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ 53 ನಿರ್ಮಾಣವಾಗಿವೆ. ಕಲ್ಯಾಣ ಕರ್ನಾಟಕದ 25 ತಾಲ್ಲೂಕುಗಳಲ್ಲಿ ನಾಡ ಕಚೇರಿಗಳನ್ನು ನಮ್ಮ ಸರ್ಕಾರ ಮಂಜೂರು ಮಾಡಿದೆ ಎಂದರು.
