Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು: ಸಿ.ಎಂ ಕರೆ
  • Bangalore
  • Front news
  • Politics
  • State

ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು: ಸಿ.ಎಂ ಕರೆ

Praja Vahini January 13, 2026 1 minute read
858d2052-3d72-4320-9aa2-18b2f43abc7c
Spread the love

ಬೆಂಗಳೂರು:  MNREGA ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ಕೆಪಿಸಿಸಿ ವತಿಯಿಂದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಸಂಗ್ರಾಮ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಇದು ಗ್ರಾಮ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಆಗುವ ಆಂದೋಲನ. ಉತ್ತರ ಭಾರತದಲ್ಲಿ ಕಾಯ್ದೆಗಳ ಬದಲಾವಣೆಗೆ ರೈತರು ಹೋರಾಡಿದಂತೆ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಕಳೆದ ತಿಂಗಳು ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆದಿದೆ. MNREGA ರದ್ದು ಮಾಡಿರುವುದನ್ನು ಪಕ್ಷ ಬಹಳ ಗಂಭೀರವಾಗಿ ಪರಿಗಣಿಸಿದೆ. ಕೇಂದ್ರ ಸರ್ಕಾರ MNREGA ರದ್ದು ಮಾಡಿ ವಿಬಿ ಜಿ ರಾಮ್ ಜಿ ಎಂಬ ಹೊಸ ಕಾಯ್ದೆಯನ್ನು ರೂಪಿಸಿದೆ. ಮಹಾತ್ಮ ಗಾಂಧಿ ಹೆಸರು ಎಂದರೆ ಅವರಿಗೆ ಅಲರ್ಜಿ ಎಂದರು.

ದೇಶದಲ್ಲಿ 12.16 ಕೋಟಿ ಕಾರ್ಮಿಕರಿಗೆ ಕೆಲಸ

ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ MNREGA ಕಾಯ್ದೆಯನ್ನು ಗ್ರಾಮೀಣ ಪ್ರದೇಶದ ಬಡವರಿಗೆ ಕೆಲಸದ ಹಕ್ಕು ನೀಡಲೆಂದು ಮೂಲಭೂತ ಹಕ್ಕನ್ನಾಗಿದ್ದರು. ನಿರುದ್ಯೋಗ, ಆಹಾರ, ಮಾಹಿತಿ, ಕಾಡಿನಲ್ಲಿ ವಾಸಿಸುವ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವ ಪ್ರಯತ್ನ ಮಾಡಿದರು. ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತ್ರಿ, ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು, ಅರಣ್ಯ ವಾಸಿಗಳ ಹಕ್ಕು ಒದಗಿಸುವ ಕಾಯ್ದೆಗಳನ್ನು ರೂಪಿಸಿದರು ಎಂದರು. 20 ವರ್ಷಗಳಿಂದ ಜಾರಿಯಲ್ಲಿದ್ದ ಕಾಯ್ದೆಯಡಿ 12.16 ಕೋಟಿ ಕಾರ್ಮಿಕರು ದೇಶದಲ್ಲಿ ಕೆಲಸ ಮಾಡುತ್ತಿದ್ದು, 6.21ಕೋಟಿ ಮಹಿಳೆಯರು ಕೆಲಸಮಾಡುತ್ತಿದ್ದಾರೆ ಎಂದರು.

ವಿಬಿಜಿ ರಾಮ್ ಜಿ ಮೂಲಕ ಮತ್ತೊಮ್ಮೆ ಗಾಂಧೀಜಿ ಕೊಲೆ

ಗ್ರಾಮೀಣ ಪ್ರದೇಶದಲ್ಲಿ 365 ದಿನಗಳ ಕಾಲ ಕೆಲಸ ಕೇಳಬಹುದಾಗಿತ್ತು. ಕಾರ್ಮಿಕರು ಅವರ ಊರಿನಲ್ಲಿ, ಅವರ ಜಮೀನಿನಲ್ಲಿಯೇ ಕೆಲಸ ಮಾಡಬಹುದಾಗಿತ್ತು. ಇದನ್ನು ಬದಲಾಯಿಸಿ ಮೋದಿ ಸರ್ಕಾರ ವಿಬಿಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ದಶರಥ ರಾಮ, ಸೀತಾ ರಾಮ ಅಥವಾ ಕೌಶಲ್ಯ ರಾಮನಲ್ಲ. ಮಹಾತ್ಮಾ ಗಾಂಧಿ ಕೊಂದ ನಾಥೂರಾಮ ಇದು. ಗಾಂಧಿಯವರನ್ನು ಮೊತ್ತೊಮ್ಮೆ ಕೊಲ್ಲುತ್ತಿದ್ದಾರೆ.ಕಾಯ್ದೆಯಡಿ ಕೆಲಸ ಕೊಡಲಿಲ್ಲ ಎಂದು ನ್ಯಾಯಾಲಯಕ್ಕೆ ಕೂಡ ಹೋಗಬಹುದಿತ್ತು ಎಂದರು.

ನರೇಗಾ ಬಚಾವ್ ಆಂದೋಲನ ಜನಾಂದೋಲನವಾಗಬೇಕು

ಈಗ ಕೇಂದ್ರ ಸರ್ಕಾರ ಅಧಿಸೂಚನೆ ಮೂಲಕ ಇಂಥ ಕಡೆ ಕೆಲಸ ಎಂದು ನಿಗದಿ ಮಾಡುತ್ತದೆ. ಅಲ್ಲಿ ಕೆಲಸ ಮಾಡಬೇಕು. ಈಗ ರಾಜ್ಯಗಳು 40% ವೆಚ್ಚವನ್ನು ಭರಿಸಬೇಕಿದೆ. 2500 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕೊಡಬೇಕಾಗುತ್ತದೆ. ಅದಕ್ಕಾಗಿಯೇ ನರೇಗಾ ಬಚಾವ್ ಆಂದೋಲನವನ್ನು ರೂಪಿಸಿದೆ. ಇದು ಜನಾಂದೋಲನವಾಗಿ ಪರಿವರ್ತನೆ ಆಗಬೇಕು ಎಂದರು.

About the Author

Praja Vahini

Editor

View All Posts

Spread the love

Post navigation

Previous: 10 ವರ್ಷಗಳಲ್ಲಿ ಕ.ಕ ದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ :  ಸಿಎಂ
Next: ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Views:

52

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.