ಬೆಳಗಾವಿ: ಲಕ್ಷಾಂತರ ಭಕ್ತರ ಶ್ರದ್ಧೆಯ ಪುಣ್ಯಕ್ಷೇತ್ರ, ತನ್ನ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಗಳ ಮೂಲಕ ಸಮಾಜಕ್ಕೆ ದಾರಿ ದೀಪದಂತೆ ಕಾಯಕ ನಡೆಸುತ್ತಿರುವ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಕ್ಷೇತ್ರ ಮುಗಳಖೋಡದ ಬೃಹನ್ಮಠದಲ್ಲಿ, ಪರಮಪೂಜ್ಯ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಗಳ ದಿವ್ಯಸಾನ್ನಿಧ್ಯದಲ್ಲಿ ಇಂದು ಜರುಗಿದ ಸದ್ಗುರು ಶ್ರೀ ಯಲ್ಲಾಲಿಂಗ ಮಹಾಪ್ರಭುಗಳ 40ನೇ ಪುಣ್ಯಾರಾಧನಾ ಕಾರ್ಯಕ್ರಮ ಮತ್ತು ಧರ್ಮಸಭೆಯಲ್ಲಿ ಬಿಜೆಪಿಯ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ, ಅಣ್ಣ ಸಾಹೇಬ ಜೊಲ್ಲೆ, ಮಾಜಿ ಶಾಸಕರು ಹಾಗೂ ಪಕ್ಷದ ರಾಜ್ಯ ಪ್ರಧಾನಕಾರ್ಯದರ್ಶಿ ಶ್ರೀ P Rajeev, ಮಾಜಿ ಶಾಸಕರುಗಳಾದ ದೊಡ್ಡನಗೌಡ ಪಾಟೀಲ್, ಚಿಕ್ಕೋಡಿ ಜಿಲ್ಲಾಧ್ಯಕ್ಷ ಸತೀಶ್ ಅಪ್ಪಾಜಿಗೋಳ್, ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶ್ರೀ ಸುಭಾಷ್ ಪಾಟೀಲ್, ಮುಖಂಡರಾದ ಶ್ರೀ ವಿಜುಗೌಡ ಪಾಟೀಲ್, ಪಕ್ಷದ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಹಲವಾರು ಪ್ರಮುಖರು, ಗಣ್ಯರು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.
