ಹಾಸನ: ಕಾಂಗ್ರೆಸ್ ಪಕ್ಷಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಪಕ್ಷವು ಇಂದು (ಶನಿವಾರ ಜ. 24) ಹಾಸನದಲ್ಲಿ ಬೃಹತ್ ಸಮಾವೇಶವನ್ನು ಕೈಗೊಂಡಿದ್ದು, ಜೆಡಿಎಸ್ ಪಕ್ಷಕ್ಕೆ 25 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪಕ್ಷಕ್ಕೆ ಇನ್ನಷ್ಟು ಹುಮ್ಮಸ್ಸು ನೀಡಲೆಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಖುದ್ದು ಅಖಾಡಕ್ಕೆ ಇಳಿದು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿ ಹಲವು ಸಚಿವರು ಭಾಗಿಯಾಗಿ ಜೆಡಿಎಸ್ ವಿರುದ್ಧ ಸಮರ ಸಾರಿದ್ದಾರೆ. ಅದಕ್ಕೆಲ್ಲ ತಿರುಗೇಟು ನೀಡಲು ಜೆಡಿಎಸ್ ಆಣಿಯಾಗಿದೆ. ಜೆಡಿಎಸ್ಗೆ 25 ವರ್ಷ ತುಂಬಿದ ಬೆನ್ನಲ್ಲೇ ಪಾರ್ಟಿಗೆ ಹೊಸ ಚೈತನ್ಯ ನೀಡಲು ದಳಪತಿ ಸಜ್ಜಾಗಿದ್ದಾರೆ. ಇದನ್ನೂ ಓದಿ: ಸನ್ಡಾನ್ಸ್ ಚಲನಚಿತ್ರೋತ್ಸವದಲ್ಲಿ ಕನ್ನಡತಿಯ ಕಂಪು
ಇಂದಿನ ಸಮಾವೇಶದಲ್ಲಿ1.20 ಲಕ್ಷ ಕುರ್ಚಿಗಳನ್ನ ಹಾಕಲಾಗಿದೆ. ಒಂದೂವರೆ ಲಕ್ಷಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಭಾಗಿಯಾಗಿಯಾಗಿದ್ದಾರೆ. ಜಿಲ್ಲೆಯ ವಿವಿಧೆಡೆಗಳಿಂದ ಸಮಾವೇಶಕ್ಕೆ ಜನರನ್ನ ಕರೆತರಲು 2 ಸಾವಿರ ಬಸ್ಗಳ ವ್ಯವಸ್ಥೆ ಮಾಡಿದ್ದು, ಸಮಾವೇಶಕ್ಕೆ ಬರುವವರಿಗೆ ಊಟದ ವ್ಯವಸ್ಥೆ ಸಹ ಕಲ್ಪಿಸಲಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪಕ್ಷದ ಹಾಲಿ ಶಾಸಕರು, ಎಂಎಲ್ಸಿಗಳು, ಮಾಜಿ ಶಾಸಕರು ಸೇರಿ ಜೆಡಿಎಸ್ ಪಕ್ಷದ ಮುಖಂಡರು ಭಾಗಿಯಾಗಿದ್ದಾರೆ.
