ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ದುರಾಡಳಿತ ದಿನದಿಂದ ದಿನಕ್ಕೆ ಮೇರಿ ನೀರಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿಯವರು ಆಕ್ರೋಶ ಹೊರ ಹಾಕಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಎಂದರೆ ಕಮಿಷನ್, ಕರಪ್ಶನ್, ಲೂಟಿ, ಗುಂಡಾವರ್ತಿ ಎಂದು ನಾವು ಹೇಳುತ್ತಿದ್ದೆವು. ಆದರೆ ಈಗ ಕಾಂಗ್ರೆಸ್ ಮಾನವೀಯ ಮೌಲ್ಯಗಳನ್ನೇ ಗಾಳಿಗೆ ತೂರಿ, ಅಧಿಕಾರವಿದ್ದರೆ ಏನು ಬೇಕಾದರೂ ಮಾಡಬಹುದು, ಹೇಗೆ ಬೇಕಾದರೂ ಮೆರೆಯಬಹುದು ಎಂಬ ದುರ್ನಡತೆಯನ್ನು ಮೈಗೂಡಿಸಿಕೊಂಡಂತೆ ಕಾಣುತ್ತಿದೆ ಎಂದು ಟೀಕಿಸಿದರು. ಇದನ್ನೂ ಓದಿ: ಸಾಯಿ ಗೋಲ್ಡ್ ಪ್ಯಾಲೆಸ್ ನಿಂದ ಗಿಲ್ಲಿಗೆ 20 ಲಕ್ಷ ಮೌಲ್ಯದ ಚಿನ್ನ ಗಿಫ್ಟ್?
ಹೊರದೇಶದಿಂದ ಪ್ರವಾಸಕ್ಕೆ ಬಂದ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಘಟನೆ ಅತ್ಯಂತ ಗಂಭೀರವಾದದ್ದು. ಇದು ಕೇವಲ ರಾಷ್ಟ್ರೀಯ ವಿಚಾರವಲ್ಲ, ಅಂತರರಾಷ್ಟ್ರೀಯ ವಿಚಾರವೂ ಹೌದು. ಆದರೆ ಗೌರವಾನ್ವಿತ ಸಂಸದ ರಾಜಶೇಖರ ಹಿಟ್ನಾಳ್ ಅವರು ಈ ಘಟನೆಗೆ ಸಣ್ಣ ಘಟನೆ ಎನ್ನುವ ರೀತಿಯಲ್ಲಿ ಮಾತನಾಡಿರುವುದು ಕಾಂಗ್ರೆಸ್ ಸಂಸ್ಕೃತಿಯ ನೈಜ ಮುಖವನ್ನು ತೋರಿಸುತ್ತದೆ ಎಂದು ಪ್ರಶ್ನಿಸಿದರು.
