Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿಬಿ ಜಿ ರಾಮ್ ಜಿ ಕಾಯ್ದೆ-ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕ: ಸಿಎಂ
  • Bangalore
  • Front news
  • Politics
  • State

ವಿಬಿ ಜಿ ರಾಮ್ ಜಿ ಕಾಯ್ದೆ-ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕ: ಸಿಎಂ

Praja Vahini January 27, 2026 1 minute read
WhatsApp Image 2026-01-25 at 18.22.14
Spread the love

ಬೆಂಗಳೂರ: ಬಡವರ ಕೆಲಸದ ಸಾಂವಿಧಾನಿಕ ಹಕ್ಕನ್ನು ಕಸಿದುಕೊಳ್ಳುವ ವಿಬಿ ಜಿ ರಾಮ್ ಜಿ ಕಾಯ್ದೆಯು ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಲೋಕಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್” ಅಂಗವಾಗಿ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರು, ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು, ಕೇಂದ್ರಸರ್ಕಾರವು ಮನರೇಗಾ ಕಾಯ್ದೆ ರದ್ದುಗೊಳಿಸಿ ವಿಬಿ ಜಿ ರಾಮ್ ಜಿ ಯನ್ನು ಜಾರಿಗೊಳಿಸಿದ್ದಾರೆ.

. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜನಪರ ಚಿಂತನೆಯಿಂದ ಜಾರಿಗೊಂಡ ಮನರೇಗಾ ಯೋಜನೆಯಡಿ ಬಡವರು, ಸಣ್ಣರೈತರು, ಮಹಿಳೆಯರು 100 ದಿನಗಳ ಕಾಲ ಕೆಲಸವನ್ನು ಖಾತ್ರಿಪಡಿಸುತ್ತಿತ್ತು. ಬಡವರಿಗೆ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು. ಆದರೆ ವಿಬಿ ಜಿ ರಾಮ್ ಜಿ ಕಾಯ್ದೆಯಿಂದ ಸಂವಿಧಾನಬದ್ಧವಾದ ಹಕ್ಕನ್ನು ಕಸಿದುಕೊಂಡಂತಾಗಿದೆ ಎಂದರು.

ಬಡವರಿಗೆ ಕೆಲಸ ಸಿಗುವ ಭರವಸೆಯಿಲ್ಲ
ಕರ್ನಾಟಕವೊಂದರಲ್ಲೇ ಸುಮಾರು 71 ಲಕ್ಷ ಜನ ಕಾರ್ಮಿಕರಿದ್ದು, ಇವರಲ್ಲಿ ಶೇ.53 ರಷ್ಟು ಮಹಿಳೆಯರು, ಶೇ. 28 ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ವರ್ಗದವರು, 5 ಲಕ್ಷ ಜನ ಅಂಗವಿಕಲ ಕಾರ್ಮಿಕರಿದ್ದಾರೆ. ಹೊಸ ಕಾಯ್ದೆಯಡಿ ಬಡ ಕೂಲಿಕಾರ್ಮಿಕರ ಕೆಲಸದ ಸ್ಥಳ ಮತ್ತು ದಿನಗಳನ್ನು ಕೇಂದ್ರ ಸರ್ಕಾರ ನಿರ್ಧಾರ ಮಾಡಲಿದೆ. ವ್ಯವಸಾಯದ 60 ದಿನಗಳು ಕೂಲಿ ಕಾರ್ಮಿಕರು ಕೆಲಸ ಮಾಡುವಂತಿಲ್ಲ. ಈ ಕಾಯ್ದೆಯಡಿ ಕೇಂದ್ರ ಸರ್ಕಾರ ಪೂರ್ಣ ಅನುದಾನ ನೀಡದೇ, ಕೇವಲ ಶೇ.60 ರಷ್ಟನ್ನು ಮಾತ್ರ ನೀಡುತ್ತಿದ್ದು, ಉಳಿದ ಶೇ. 40 ರಷ್ಟನ್ನು ರಾಜ್ಯ ಸರ್ಕಾರ ನೀಡಬೇಕಿದೆ. ಜನರಿಗೆ ಮಾರಕವಾದ ಕಾಯ್ದೆಯಾಗಿದೆ. ಗ್ರಾಮೀಣ ಪ್ರದೇಶದ ಕಾರ್ಮಿಕರಿಗೆ ಕೆಲಸವನ್ನು ಕಸಿದುಕೊಂಡಂತಾಗಿದೆ ಎಂದರು.

ಮನರೇಗಾ ಪುನರ್ಸ್ಥಾಪನೆಯಾಗುವವರೆಗೂ ಹೋರಾಟ

ಇಂತಹ ಜನವಿರೋಧಿ ಕಾಯ್ದೆ ತರಲು ಕೇಂದ್ರಕ್ಕೆ ಆರ್ ಎಸ್ ಎಸ್ ಪ್ರೇರಣೆ ನೀಡಿದ್ದು, ಬಡಜನರು ಆರ್ಥಿಕವಾಗಿ ಸ್ವಾವಲಂಬಿಗಳಾಗಬಾರದು ಎಂಬುದು ಬಿಜೆಪಿ ಆರ್ ಎಸ್ ಎಸ್ ನ ದುರುದ್ದೇಶ. ಆದ್ದರಿಂದ ಕೇಂದ್ರದ ಈ ಕಾಯ್ದೆಯನ್ನು ರದ್ದುಗೊಳಿಸಿ, ಮನರೇಗಾ ಹೋರಾಟವನ್ನುಪುನರ್ಸ್ಥಾಪಿಸಬೇಕೆಂದು ಹೋರಾಟ ನಡೆಸಲಾಗುತ್ತಿದೆ. ಈ ಸಂಬಂಧ ಗ್ರಾಮ,ತಾಲ್ಲುಕು, ಜಿಲ್ಲಾ ಹಂತಗಳಲ್ಲಿಯೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಕಮಿಷನ್, ಭ್ರಷ್ಟಾಚಾರ, ಲೂಟಿ ಸರಕಾರ: ಛಲವಾದಿ ನಾರಾಯಣಸ್ವಾಮಿ ಟೀಕೆ
Next: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ

Views:

45

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.