ಬೆಂಗಳೂರು: ನಾಥೂರಾಮ್ ಗೋಡ್ಸೆ ಎಂಬ ಭಯೋತ್ಪಾದಕನ ಗುಂಡಿಗೆ ಬಲಿಯಾದ ಮಹಾತ್ಮ ಗಾಂಧಿಯವರ ಬಲಿದಾನ ದಿನದ ಸ್ಮರಣೆಯಲ್ಲಿ ಆಚರಿಸುವ ಹುತಾತ್ಮರ ದಿನಾಚರಣೆ ಪ್ರಯುಕ್ತ ವಿಧಾನಸೌಧ ಆವರಣದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದೆ.
ಸತ್ಯ, ಶಾಂತಿ, ಅಹಿಂಸೆ ಇವು ಗಾಂಧಿಯವರ ಬೋಧನೆಗಳಷ್ಟೇ ಅಲ್ಲ, ಅವರ ಬದುಕು ಕೂಡ. ಅನ್ಯಾಯ, ದಬ್ಬಾಳಿಕೆಗಳ ವಿರುದ್ಧದ ಹೋರಾಟಕ್ಕೆ ಗಾಂಧಿ ಚಿಂತನೆಗಳೇ ಇಂದಿಗೂ ಬೆಳಕಾಗಿದೆ.
ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಬೋಸರಾಜು, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಸೇರಿ ಹಲವು ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ಇದನ್ನೂ ಓದಿ: ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಬಾರದು, ಸಮಾಜದ ಅಂಕುಡೊಂಕುಗಳನ್ನು ತಿದ್ದಬೇಕು: ಸಿಎಂ
