ಬೆಂಗಳೂರು: ಹೆಸರಾಂತ ಉದ್ಯಮಿ ಎಂದೇ ಖ್ಯಾತಿ ಹೊಂದಿದ್ದ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಅವರು ಇಂದು (ಶುಕ್ರವಾರ ಜನವರಿ 30) ರಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಐಟಿ ದಾಳಿಗೆ ಹೆದರಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಲ್ಯಾಂಡ್ ಫರ್ಡ್ ರಸ್ತೆಯಲ್ಲಿ ನಡೆದಿದೆ.
ಇಂದು (ಜ.30) ಕಾನ್ಫಿಡೆಂಡ್ ಗ್ರೂಪ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಇದೇ ರೀತಿ ಕಳೆದ 3 ವರ್ಷಗಳಿಂದ ಐಟಿ ದಾಳಿ ನಡೆಸುತ್ತಿತ್ತು. ಇದರಿಂದ ಬೇಸತ್ತಿದ್ದ ಉದ್ಯಮಿ ಇಂದು ದಾಳಿ ವೇಳೆ ಪಿಸ್ತೂಲಿನಿಂದ ಹೊಡೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ:
ಘಟನೆ ಕುರಿತು ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಎಂ ಹಾಕೆ ಅವರು ಐಟಿ ಅಧಿಕಾರಿಗಳ ಬಳಿ ಮಾಹಿತಿ ಕಲೆಹಾಕುತ್ತಿದ್ದಾರೆ.
