ಬೆಂಗಳೂರು: ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ನಡೆಯುವ ರಿಯಾಲಿಟಿ ಶೋಗಳಲ್ಲಿ ಗೆಲ್ಲುವ ಕಂಟೆಸ್ಟೆಂಟ್ಗಳಿಗೆ ಕಾನ್ಫಿಡೆಂಟ್ ಗ್ರೂಪ್ ನ ಮೂಲಕ ಲಕ್ಷಗಟ್ಟಲೆ ಸ್ಪಾನ್ಸರ್ ಮಾಡಿ ಅವರಿಗೆ ಮನೆ ಹಾಗೂ ಹಣ ನೀಡುವ ಮೂಲಕ ಇಡೀ ದೇಶದ ಮನೆ ಮಾತಾಗಿದ್ದ ಕಾನ್ಫಿಡೆಂಟ್ ಗ್ರೂಪ್ ನ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅದೆಷ್ಟೋ ಬಡ ಕುಟುಂಬಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಸಿಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದೇ ಈಗ ಎಲ್ಲೆಡೆ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ಕಾನ್ಫಿಡೆಂಟ್ ಗ್ರೂಪ್ ನ ಮುಖ್ಯಸ್ಥ ಸಿಜೆ ರಾಯ್
ಅಂತಹ ಸಾವಿರಾರು ಕೋಟಿ ಒಡೆಯ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಮುಖ ಕಾರಣವಾದರೂ ಏನು ಎಂಬುವುದೇ ಈಗ ಎಲ್ಲರಲ್ಲಿರುವ ಪ್ರಶ್ನೆ.
ಪದೇ ಪದೇ ಕಾನ್ಫಿಡೆಂಟ್ ಗ್ರೂಪ್ ಮೇಲೆ ಐಟಿ ದಾಳಿ ಆಗುತ್ತಿರುವುದಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದಕ್ಕೆ ಮೂಲ ಕಾರಣವೇನೆಂದು ವಿಚಾರಣೆ ಮಾಡಿದ ನಂತರವೇ ಎಲ್ಲಾ ತಿಳಿಯಲಿದೆ.
ಒಟ್ಟಿನಲ್ಲಿ ಅದೇನೆ ಆಗಲಿ ಸಾವಿರಾರು ಕೋಟಿ ಒಡೆಯ ಇಂದು ಆತ್ಮಹತ್ಯೆ ಮಾಡಿಕೊಂಡಿರುವುದು ಎಷ್ಟೋ ಬಡ ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬಗಳಿಗೆ ತುಂಬಲಾರದ ನಷ್ಟವಾಗಿದೆ.
