Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪೂಜ್ಯಶ್ರೀಗಳು ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತತೆಗೆ ಮನ್ನಣೆ ನೀಡಿದ್ದರು: ಸಿಎಂ
  • Front news
  • Politics
  • State

ಪೂಜ್ಯಶ್ರೀಗಳು ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತತೆಗೆ ಮನ್ನಣೆ ನೀಡಿದ್ದರು: ಸಿಎಂ

Praja Vahini February 1, 2026 1 minute read
d56f95a7-36df-4915-8eb2-935750e41820
Spread the love

ರಾಯಚೂರು: ರಾಜ್ಯದಲ್ಲಿ   ಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಬ್ರಹ್ಮಲೀನರಾದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಶ್ರೀಗಳ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ
ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು , ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣ ವಾಗಿದೆ.ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಮನುಜರೆಲ್ಲರೂ ಒಂದೇ ಕುಟುಂಬ
ಕನಕದಾಸರು ‘ಕುಲಕುಲವೆಂದು ಹೊಡೆದಾಡದಿರಿ’ ಎಂದಂತೆ ಬುದ್ಧಬಸವಾದಿಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ ಧರ್ಮ ವರ್ಗ ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ. ಶಿಕ್ಷಣವಿಲ್ಲದೇ ಪ್ರಗತಿ ಸಾಧ್ಯವಿಲ್ಲ. ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣ ವಾಗಿದೆ. ಯಾವುದೇ ಧರ್ಮವೂ ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬನ್ನಿ-ಸಮಾಜಕ್ಕೆ ಸಿಎಂ ಕರೆ
ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭೀಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಯುವಪೀಳಿಗೆ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15 ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ , ಸಾಮಾಜಿಕ ಸಮಾನತೆ ಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ವಿತ್ತ ಸಚಿವೆ ಮಂಡಿಸಿದ 9 ನೇ ಕಳಪೆ ಮತ್ತು ಕರ್ನಾಟಕ ವಿರೋಧಿ ಬಜೆಟ್: ಡಾ.ಹೆಚ್.ಸಿ ಮಹದೇವಪ್ಪ
Next: ಇಂದೇ ರಶ್ಮಿಕಾ ಮಂದಣ್ಣ ವಿಜಯ್ ಮದುವೆ!?  

Views:

18

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.