ಬೆಂಗಳೂರು: ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರಿಬ್ಬರು ಮದುವೆಯಾಗುತ್ತಾರೆ ಎಂದು ಈಗಾಗಲೇ ಹಲವಾರು ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅವರಿಬ್ಬರೂ ಉದಯಪುರದಲ್ಲಿರುವ ಸಿಟಿ ಪ್ಯಾಲೇಸ್ ನಲ್ಲಿ ಅದ್ದೂರಿಯಾಗಿ ಮದುವೆಯಾಗಲಿದ್ದಾರೆ ಎಂಬ ಮಾಹಿತಿ ಮತ್ತೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲಾಗುತ್ತಿವೆ.
ಹೌದು, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಅವರಿಬ್ಬರ ಮಧ್ಯೆ ಪ್ರೇಮವು ಪ್ರಾರಂಭವಾಗಿ ಈಗಾಗಲೇ ಹಲವಾರು ವರ್ಷಗಳೇ ಕಳೆದಿದ್ದು, ಇದೀಗ ಇವರಿಬ್ಬರು ಹಸೆಮಣೆ ಏರಲಿದ್ದಾರೆ ಎಂಬ ಸಿದ್ದಿಯು ಎಲ್ಲೆಡೆ ಗ್ರಾಸವಾಗಿ ಚರ್ಚೆಯಾಗುತ್ತಿದೆ. ಆದರೆ ಈ ಕುರಿತು ಇಬ್ಬರು ಅಧಿಕೃತವಾಗಿಯೂ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.
ಒಟ್ಟಿನಲ್ಲಿ ಇವರಿಬ್ಬರೂ ಹಿಂದೆ ಅಂದರೆ (ಸೋಮವಾರ ಫೆಬ್ರುವರಿ 02) ರಂದು ಉದಯಪುರದಲ್ಲಿ ಅದ್ದೂರಿಯಾಗಿ ಹಸೆಮಣೆ ಏರಲಿದ್ದಾರೆ ಎಂಬ ಮಾಹಿತಿ ಮಾತ್ರ ಹೊರಬಿದ್ದಿದೆ.
ಇನ್ನುಈ ವಿವಾಹ ಅತ್ಯಂತ ಖಾಸಗಿಯಾಗಿ ನೆರವೇರಲಿದೆಯೆಂಬ ಮಾಹಿತಿ ಲಭ್ಯವಾಗಿದೆ. ಯಾವುದೇ ಅತಿಥಿಗಳ ಗಲಾಟೆ ಇಲ್ಲದೇ, ಆಯ್ದ ಕೆಲವೇ ಮಂದಿ ಸಮ್ಮುಖದಲ್ಲಿ ಮದುವೆ ನಡೆಯಲಿದೆ ಎನ್ನಲಾಗುತ್ತಿದೆ.
ಈ ಹಿಂದೆ ವಿಜಯ್ ದೇವರಕೊಂಡ ಅವರ ನಿವಾಸದಲ್ಲಿ ಗುಟ್ಟಾಗಿಯೇ ನಿಶ್ಚಿತಾರ್ಥ ನಡೆದಿತ್ತು ಎಂಬ ಸುದ್ದಿಯೂ ಹರಿದಾಡಿತ್ತು. ಮದುವೆಯನ್ನೂ ಸಹ ಸಾಕಷ್ಟು ರಹಸ್ಯವಾಗಿ ನಡೆಸಲಾಗುತ್ತಿದೆ. ಇದನ್ನೂ ಓದಿ: ಪೂಜ್ಯಶ್ರೀಗಳು ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತತೆಗೆ ಮನ್ನಣೆ ನೀಡಿದ್ದರು: ಸಿಎಂ
ಉದಯಪುರದ ಸಿಟಿ ಪ್ಯಾಲೇಸ್ ಹೋಟೆಲ್ನಲ್ಲಿ ವಿವಾಹ ನಡೆಯುತ್ತಿದೆ ಎಂಬುದಾಗಿ ವೈರಲ್ ಆಗಿರುವ ವಿಡಿಯೋದಲ್ಲಿರುವವರು ಹೇಳಿಕೊಂಡಿದ್ದಾರೆ. ಅವರ ಮಾಹಿತಿ ಪ್ರಕಾರ ಫೆಬ್ರವರಿ 2ರಂದೇ ಮದುವೆ ನಡೆಯಲಿದೆ ಎನ್ನಲಾಗಿದೆ.
