ಎಲ್ಲೆಡೆ ನೋಡಿದರು ಆರ್ಸಿಬಿ ಅಭಿಮಾನಿಗಳ ಸಂಭ್ರಮ ಮನೆ ಮಾಡಿದೆ. ಕ್ರಿಕೆಟ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ಮಾಡುತ್ತಿದ್ದಾರೆ.
ಹೌದು, ಕ್ರಿಕೆಟ್ ಅಭಿಮಾನಿಗಳು ಎಲ್ಲೆಡೆ ಹಬ್ಬದ ಸಂಭ್ರಮ ಆಚರಣೆಯಲ್ಲಿ ತೊಡಗಿದ್ದು ನಿನ್ನೆ ಗುರುವಾರ ಫೆಬ್ರುವರಿಂದು ವಡೋದಾರದ ಕೋಟಂಬಿ ಮೈದಾನದಲ್ಲಿ ಡಬ್ಲುಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡನೇ ಬಾರಿಗೆ ಚಾಂಪಿಯನ್ ಆಗುವ ಮೂಲಕ ಟ್ರೋಫಿಗೆ ಮುತ್ತಿಕ್ಕಿದ್ದಾರೆ.
ಯೆಸ್…2026 ರ ಮಹಿಳಾ ಪ್ರೀಮಿಯರ್ ಲೀಗ್ನಲ್ಲಿ RCB ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸ್ಮೃತಿ ಮಂಧಾನ ನಾಯಕತ್ವದ RCB, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದೆ.
ಇಡೀ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಆರ್ಸಿಬಿ ಲೀಗ್ ಹಂತದಲ್ಲಿ 5 ಪಂದ್ಯಗಳನ್ನು ಗೆದ್ದು ನೇರವಾಗಿ ಫೈನಲ್ಗೇರಿತ್ತು. ಇದೀಗ ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸುವುದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಬಾರಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಇದನ್ನೂ ಓದಿ: ಇಂದು ನಡೆಯಲಿರುವ ಫೈನಲ್ ನಲ್ಲಿ ಟ್ರೋಫಿಗೆ ಮುತ್ತಿಕ್ಕೋರು ಯಾರು?
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 203 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆರ್ಸಿಬಿ ಪರ ನಾಯಕಿ ಸ್ಮೃತಿ ಮಂಧಾನ ಹಾಗೂ ಜಾರ್ಜಿಯಾ ವಾಲ್ ಗೆಲುವಿನ ಅರ್ಧಶತಕ ಬಾರಿಸಿ ತಂಡವನ್ನು ಚಾಂಪಿಯನ್ ಮಾಡಿದರು.
