ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಅಮಾಯಕರ ಅಕೌಂಟ್ಗಳ ಮಾಹಿತಿ ಪಡೆದು ಹಣ ದೋಚುತ್ತಿದ್ದ ಸೈಬರ್ ದಂಧೆ ನಡೆಸುತ್ತಿದ್ದ ಸೈಬರ್ ಕೋರರನ್ನು ಸೈಬರ್ ಕ್ರೈಂ ವಿಭಾಗದ ಅಧಿಕಾರಿಗಳು ಇಂದು (ಶುಕ್ರವಾರ ಫೆ. 06) ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಸುಮಾರು 40 ಸಾವಿರಕ್ಕೂ ಹೆಚ್ಚು ಅಕ್ರಮ ಮ್ಯೂಲ್ ಅಕೌಂಟ್ ಗಳನ್ನು ಪತ್ತೆ ಹಚ್ಚಿದ್ದಾರೆ.
ಸಿಐಡಿ ತಂಡ ಇಂದು 100ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ದಾಳಿ ಈ ಪ್ರಕರಣದ ಪ್ರಮುಖ 13 ಮಾಸ್ಟರ್ ಮೈಂಡ್ಗಳನ್ನು ಬಂಧಿಸಿದೆ. ಅಮಾಯಕ ಜನರ ಬ್ಯಾಂಕ್ ಖಾತೆ, ಎಟಿಎಂ ಕಾರ್ಡ್ ಹಾಗೂ ಖಾತೆ ವಿವರಗಳನ್ನು ಹಣಕ್ಕಾಗಿ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡಲಾಗುತ್ತಿತ್ತು ಎಂಬುದು ಸಿಐಡಿ ತನಿಖೆ ವೇಳೆ ಬಯಲಾಗಿದೆ. ಈ ಮ್ಯೂಲ್ ಅಕೌಂಟ್ಗಳ ಮೂಲಕ ಆನ್ಲೈನ್ ವಂಚನೆ ನಡೆಸಿ ಹಣ ವರ್ಗಾವಣೆ ಹಾಗೂ ಎಟಿಎಂ ಮೂಲಕ ಹಣ ವಿತ್ಡ್ರಾ ಮಾಡಲಾಗುತ್ತಿತ್ತು. ಇದನ್ನೂ ಓದಿ: ಕಮಲಾಕರ್ ಭಟ್ ಸುಚಿತ್ರಾ ಇಬ್ಬರ ನಡುವಿನ ರಂಗನಾಟ ಒಂದೊಂದೇ ಬಯಲು
ಖಾತೆ ವಿವರ ನೀಡಿದ ಅಮಾಯಕರಿಗೆ ಈ ವಂಚನೆಯ ಬಗ್ಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿದು ಬಂದಿದೆ. ತನಿಖೆಯ ವೇಳೆ ಸುಮಾರು 42 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್ಗಳು ಬಳಕೆಯಲ್ಲಿರುವುದು ಪತ್ತೆಯಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.
