ಬೆಂಗಳೂರು: ಇತ್ತೀಚಿಗೆ ಕರ್ನಾಟಕ ಸರ್ಕಾರವು ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿಮನ್ನಾಗೆ ಒನ್ ಟೈಮ್ ಸ್ಟೇಟ್ಮೆಂಟ್ ಯೋಜನೆಗೆ ಅನುಮೋದನೆ ನೀಡಿರುವ ಕುರಿತಾಗಿ ಇದೀಗ ರಾಜ್ಯ ರಾಜಕೀಯದಲ್ಲಿ ವಿರೋಧ ಪಕ್ಷದ ನಾಯಕರು ಕಿಡಿ ಕಾರುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ಇರುವುದೇ ಕೇವಲ ಅಲ್ಪಸಂಖ್ಯಾತರ ಅಭಿವೃದ್ಧಿಗಾ? ಅಥವಾ ರಾಜ್ಯದಲ್ಲಿರುವ ಪ್ರತಿ ಸಮುದಾಯಗಳ ಅಭಿವೃದ್ಧಿಗಾಗಿ ಎಂದು ಪ್ರಶ್ನಿಸುತ್ತಿದ್ದಾರೆ.
ಕೇವಲ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತರ ಒಲೈಕಿಗೆ ಮುಂದಾಗಿದ್ದು, ಇನ್ನುಳಿದ ಸಮುದಾಯದ ಜನರು ಏನು ಪಾಪ ಮಾಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಕೇವಲ ಒಂದು ನಿಗಮದಲ್ಲಿ ಈ ರೀತಿ ಬಡ್ಡಿ ಮನ್ನಾ ಮಾಡಿದರೆ, ಉಳಿದ ನಿಗಮಗಳಿಂದಲೂ ಇಂತಹ ಬೇಡಿಕೆ ವ್ಯಕ್ತವಾಗಬಹುದು. ಇದು ಸರ್ಕಾರದ ಆದಾಯದ ಮೇಲೆ ಪರಿಣಾಮ ಬೀರಬಹುದೆಂದು ಎಚ್ಚರಿಸಿದೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣಾ ಪೂರ್ವಭಾವಿ ಸಭೆ
ಮತ್ತೊಂದೆಡೆ ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ಮೆಲೆ ಮುಗಿಬಿದ್ದಿದ್ದು, ಇದೇ ರೀತಿಯ ಸೌಲಭ್ಯವನ್ನು ಸರ್ಕಾರ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ನಿಗಮ ಮತ್ತು ಇತರೆ ಹಿಂದುಳಿದ ವರ್ಗಗಳ ನಿಗಮಗಳ ಫಲಾನುಭವಿಗಳಿಗೆ ಯಾಕೆ ನೀಡುತ್ತಿಲ್ಲ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ಮಾಜಿ ಸಿಎಂ ಮತ್ತು ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಕೂಡ ಈ ಬಗ್ಗೆ ಕಿಡಿ ಕಾರಿದ್ದು, ರಾಜ್ಯ ಸರ್ಕಾರವು ವ್ಯಾಪಕ ಆರ್ಥಿಕ ಸಂಕಷ್ಟಗಳನ್ನು ಪರಿಹರಿಸುವ ಬದಲು ಮತಬ್ಯಾಂಕ್ ರಾಜಕಾರಣದಲ್ಲೇ ತೊಡಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
