ಬೆಂಗಳೂರು: ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಇಂದು ಸೋಮವಾರ ಫೆಬ್ರುವರಿ 9ರಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತೇಜಸ್ವಿ ಸೂರ್ಯ ಅವರಿಗೆ ಮೆಟ್ರೋ ದರ ಏರಿಕೆ ಬಗ್ಗೆ ಮಾತನಾಡುವುದೇನೆ ಇದ್ದರೂ ಅದು ಪ್ರಧಾನಮಂತ್ರಿಗಳ ಮುಂದೆ ಮಾತನಾಡಲಿ. ಮೆಟ್ರೋ ನಮ್ಮ ಯೋಜನೆ ಎಂದು ಪ್ರಚಾರ ಪಡೆಯುತ್ತಿರುವವರು ಯಾರು? ತೇಜಸ್ವಿ ಸೂರ್ಯ ಅವರು ಮೆಟ್ರೋ ನಮ್ಮ ಕೊಡುಗೆ ರಾಜ್ಯ ಸರ್ಕಾರದ್ದಲ್ಲ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಮೆಟ್ರೋ ಕೇಂದ್ರ ಸರ್ಕಾರದ ಸಮಿತಿ ಕೈಯಲ್ಲಿದೆ. ಆ ಸಮಿತಿ ತೀರ್ಮಾನದಂತೆ ಮೆಟ್ರೋ ದರ ಏರಿಕೆ ಮಾಡಲಾಗುತ್ತದೆ. ದರ ಏರಿಕೆ ಆಗಬಾರದು ಎಂಬುದೂ ನಮ್ಮ ಇಚ್ಛೆ. ತೇಜಸ್ವಿ ಸೂರ್ಯ ಅವರ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದು, ಅವರು ತೀರ್ಮಾನ ಮಾಡಿ ಜನರಿಗೆ ಅನುಕೂಲ ಮಾಡಿಕೊಡಲಿ ಎಂದು ಸುರೇಶ್ ಅವರು ವಾಗ್ದಾಳಿ ನಡೆಸಿದರು.
ಅವರು ಖಾಲಿ ಟ್ರಂಕ್ ಹಿಡಿದಿರುವುದು, ಕರ್ನಾಟಕದ 4.5- 5 ಲಕ್ಷ ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿಕೊಂಡು ಹೋಗುತ್ತಿರುವುದನ್ನು ತೋರಿಸಲು. ಕೇಂದ್ರ ಸರ್ಕಾರ ಕಳೆದ 12 ವರ್ಷಗಳಿಂದ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಪಟ್ಟಿ ಹೇಳಲಿ. ಬೆಂಗಳೂರಿಗೆ ಅವರ ಕೊಡುಗೆ ಖಾಲಿ ಡಬ್ಬ ಎಂದು ತೇಜಸ್ವಿ ಸೂರ್ಯ ತೋರಿಸುತ್ತಿರುವುದನ್ನು ಮಾಧ್ಯಮಗಳು ಚೆನ್ನಾಗಿ ತೋರಿಸಿ” ಎಂದು ಕಿಡಿಕಾರಿದರು. ಇದನ್ನೂ ಓದಿ: ಅಲ್ಪಸಂಖ್ಯಾತರ ಸಾಲಕ್ಕೆ ಬಡ್ಡಿ ಮನ್ನಾ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳು ಕೆಂಡಮಂಡಲ!
ರಾಜ್ಯ ಸರ್ಕಾರದ ಪಾತ್ರ ಇದೆ. ದರ ಇಳಿಕೆ ಬಗ್ಗೆ ಕೇಂದ್ರದ ಸಮಿತಿ ಮುಂದೆ ಪ್ರಸ್ತಾವನೆ ನೀಡಲಾಗಿದೆ. ಕೇಂದ್ರ ಸಮಿತಿಯ ತಾಂತ್ರಿಕ ಸಲಹಾ ಸಮಿತಿ ನಿರ್ದೇಶನದ ಮೇರೆಗೆ ಈ ತೀರ್ಮಾನ ಮಾಡಿದ್ದಾರೆ. ತೇಜಸ್ವಿ ಸೂರ್ಯ ಅವರು ತಮ್ಮ ಬದ್ಧತೆಯನ್ನು ಕೇಂದ್ರ ಸರ್ಕಾರದ ಮುಂದೆ ಪ್ರದರ್ಶಿಸಲಿ” ಎಂದು ತಿಳಿಸಿದರು.
