ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯರವರು ಒಬ್ಬ ಪ್ರಾಮಾಣಿಕ ಹಾಗೂ ಧೀಮಂತ ರಾಜಕಾರಣಿ. ಸುಂದರವಾದ, ಭವ್ಯವಾದ ವಿಧಾನಸೌಧ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯರವರ ಜಯಂತಿ ಅಂಗವಾಗಿ ಇಂದು (ಮಂಗಳವಾರ ಫೆ. 10) ವಿಧಾನಸೌಧ ಆವರಣದಲ್ಲಿರುವ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ನಾಯಕರಾಗಿ, ಕೇಂದ್ರದ ರೈಲ್ವೆ ಮಂತ್ರಿಯಾಗಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಂವಿಧಾನ ರಚನಾ ಸಮಿತಿಗೆ ಅಮೂಲ್ಯ ಸಲಹೆಗಳನ್ನು ನೀಡಿ, ರಾಷ್ಟ್ರ ನಿರ್ಮಾಣದಲ್ಲಿ ಅಮೂಲ್ಯ ಕೊಡುಗೆಯನ್ನು ನೀಡಿದಂತಹ ಧೀಮಂತ ರಾಜಕಾರಣಿಯೊಬ್ಬರು ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಬಿಜೆಪಿ ಶಾಸಕನಿಗೆ ಶುರುವಾಯಿತು ಬಂಧನದ ಭೀತಿ!
ರಾಜ್ಯದ ಪ್ರಥಮ ಚುನಾಯಿತ ಮುಖ್ಯಮಂತ್ರಿಯಾಗಿದ್ದರು. ಹನುಮಂತಯ್ಯನವರು ವಿಧಾನಸೌಧಕ್ಕೆ ಬುನಾದಿ ಹಾಕಿದರಾದರೂ, ಉದ್ಘಾಟನೆಯ ಸಂದರ್ಭದಲ್ಲಿ ಅವರು ಮುಖ್ಯಮಂತ್ರಿಯಾಗಿರಲಿಲ್ಲವೆಂಬುದು ನೋವಿನ ಸಂಗತಿ. ಅವರ ಆದರ್ಶ ಮತ್ತು ಸಿದ್ದಾಂತಗಳು ಎಲ್ಲರಿಗೂ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು.
