ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾವಿರ ದಿನ ಪೂರೈಸಿರುವುದರಿಂದ ರಾಜ್ಯ ಸರ್ಕಾರವು ಸಾಧನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಇದೀಗ ಸಾಧನ ಸಮಾವೇಶದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವ್ಯಂಗ್ಯವಾಡಿದ್ದಾರೆ.
ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳು ಈಗಾಗಲೇ ‘ಪಂಚರ್’ ಆಗಿವೆ. ಮುಖ್ಯಮಂತ್ರಿ ಅವರ ಸರ್ಕಾರ ‘ಜನರನ್ನು ಕಾಯಿಸುವುದೇ ಕೈಲಾಸ’ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು. ರಾಜ್ಯದ ಜನರಿಗೆ ಯೋಜನೆಗಳ ಲಾಭ ಪಡೆಯಲು ಕಾಯಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.
ನೂರು ಸುಳ್ಳು ಹೇಳಿ ಮದುವೆ ಮಾಡು ಎನ್ನುವಂತೆ ರಾಜ್ಯ ಕಾಂಗ್ರೆಸ್ ನವರು ಜನರಿಗೆ ಸಾವಿರ ಸುಳ್ಳು ಹೇಳಿ ಅನ್ಯಾಯ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ದೇಶದ ಇತಿಹಾಸದಲ್ಲೇ ಹೊಸ ಮಾದರಿಯನ್ನು ಪರಿಚಯಿಸಿದ ಹೆಮ್ಮೆ ನಮ್ಮದು: ಸಿಎಂ
ಅಹಿಂದ ಹೆಸರಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಒಕ್ಕಲಿಗ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು. ರಾಮರಾಜ್ಯ ತರುವುದಾಗಿ ಹೇಳಿ ಅಧಿಕಾರಕ್ಕೆ ಬಂದು ಜನರನ್ನು ಮೋಸಗೊಳಿಸಿದ್ದಾರೆ ಎಂದು ದೂರಿದರು.
