Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ
  • Politics
  • State
  • ಹಾವೇರಿ

ಬಿಜೆಪಿಗೆ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

Praja Vahini February 14, 2026 1 minute read
WhatsApp Image 2026-02-14 at 16.37.42
Spread the love

ಹಾವೇರಿ: ನಮ್ಮನ್ನು ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ. 4 ವರ್ಷಗಳಲ್ಲಿ ಅವರು ಏನು ಮಾಡಿದ್ದಾರೆ. 2018 ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು. ಅದರಲ್ಲಿ ಶೇ.10% ರಷ್ಟು ಈಡೇರಿಸಿಲ್ಲ.  ನಾವು ನೀಡಿದ್ದ 592 ಭರವಸೆಗಳಲ್ಲಿ 243 ಭರವಸೆಗಳನ್ನು ಎರಡೂವರೆ ವರ್ಷಗಳಲ್ಲಿ ಈಡೇರಿಸಿದ್ದೇವೆ. ಉಳಿದವನ್ನು ಈಡೇರಿಸಲು ಪ್ರಯತ್ನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಾವೇರಿಯ ಸರ್ಕಾರಿ ಮೆಡಿಕಲ್ ಕಾಲೇಜು ಆವರಣದ ಇಂದು (ಶನಿವಾರ ಫೆ.14) ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಸಮಾವೇಶ ಮಾಡುತ್ತಿರುವುದು ಸಾವಿರ ದಿನಾಚರಣೆ ಮೈಲಿಗಲ್ಲು ಅಲ್ಲ. ದೇಶದ ಬಡವರು, ಮಹಿಳೆಯರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ಮುಂದುವರೆಸುತ್ತಿದ್ದೇವೆ. ಇಲ್ಲಿಯವರೆಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದು, ಮುಂದೆಯೂ ನಡೆದುಕೊಳ್ಳುತ್ತೇವೆ

ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ. ಬಿಜೆಪಿಯವರು ಸಮಾವೇಶಕ್ಕೆ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೊಟ್ಟೆಕಿಚ್ಚಿನಿಂದ ವಿರೋಧಿಸುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದ ನಾಲ್ಕು ವರ್ಷಗಳ ಕಾಲ ಏನೂ ಮಾಡಿರಲಿಲ್ಲ ಎಂದರು. ಇದನ್ನೂ ಓದಿ: ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎಂದು ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ: ಸಿಎಂ

ಕಾಂಗ್ರೆಸ್ ಸರ್ಕಾರ ವಚನ ಭ್ರಷ್ಟ ಸರ್ಕಾರ ಎಂದು ಸಂಸದ ಬಿ. ವೈ.ರಾಘವೇಂದ್ರ ಹೇಳಿರುವುದು ಮಾಡಿರುವುದು ಸುಳ್ಳು ಆರೋಪ ಎಂದರು.

ಅಧಿಕಾರ ಹಂಚಿಕೆ: ಪಕ್ಷದ ತೀರ್ಮಾನ ಅಂತಿಮ

ಅಧಿಕಾರ ಹಂಚಿಕೆಯ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು ಎಂದು ಈಗಾಗಲೇ ತಿಳಿಸಲಾಗಿದೆ. ವರಿಷ್ಠರು ಹೇಳಿದ್ದನ್ನು ಪಕ್ಷದ ಎಲ್ಲರೂ ಕೇಳಬೇಕು ಎಂದರು. ಶಾಸಕರು ಈ ಬಗ್ಗೆ ಮಾಡಿರುವ ಟ್ವೀಟ್ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಪಕ್ಷದ ವರಿಷ್ಠರು ಮಾಡಿದ್ದರೆ ಮಾಡಿದ್ದಾರೆಯೇ?  ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಭರವಸೆ ಈಡೇರಿಸದ ಬಿಜೆಪಿ ಈಗ ನಮ್ಮ ಖಜಾನೆ ಖಾಲಿ ಆಗಿದೆ ಎಂದು ಸುಳ್ಳು ಪ್ರಚಾರದಲ್ಲಿ ನಿರತವಾಗಿದೆ: ಸಿಎಂ
Next: ಹೂವಲ್ಲಿ ಅರಳಿದ ವಿಜಯನಗರ ಸಾಮ್ರಾಜ್ಯ

Views:

34

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.