ಬೆಂಗಳೂರು: ಬೆಂಗಳೂರಿನ ಕಸವನ್ನ ನಿಯಮಬಾಹಿರವಾಗಿ ದೊಡ್ಡಬಳ್ಳಾಪುರಕ್ಕೆ ಸಾಗಲಾಗಿಸುತ್ತಿದೆ ಎಂದು ಬಿಜೆಪಿ ಶಾಸಕರು ಆರೋಪಿಸಿದ್ದು, ಈ ಆರೋಪಕ್ಕೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಖಡಕ್ ವಾರ್ನಿಂಗ್ ನೀಡಿದ್ದಾರೆ.
ಬಿ ವೈ ವಿಜಯೇಂದ್ರ, ಆರ್ ಅಶೋಕ್ ಮನೆಯ ಮುಂದೇನೆ ನಾನು ಕಸ ಹಾಕಿಸ್ತೀನಿ ಎಂದು ವಾರ್ನ್ ಮಾಡಿದ್ದಾರೆ.
ಈ ಕುರಿತು ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಎಸ್ಮಾ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ನೇಮಕಾತಿ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯವನ್ನೇ ಘಟಕವಾಗಿಸಲು ನಿರ್ಧಾರ : ಹೆಚ್ ಸಿ ಮಹದೇವಪ್ಪ
ಎಲ್ಲಾ ಶಾಸಕರು ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಅಂತ ಆಕ್ಸಿಡೆಂಟ್ ವಿಚಾರ ಮುಂದಿಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ. ಎಲ್ಲರೂ ಗೌರವದಿಂದ ಇದ್ರೆ ಸರಿ, ಇಲ್ಲದಿದ್ರೆ ಕರುಣೆ ತೋರಿಸಲ್ಲ. ಎಸ್ಮಾ ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತೆ ಎಂದು ಎಚ್ಚರಿಸಿದರು.
