ಗುವಾಹಟಿ: ಅಸ್ಸಾಂ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಯುತ್ತಿದ್ದು ಕರ್ನಾಟಕದಿಂದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಚುನಾವಣಾ ವೀಕ್ಷಕರಾಗಿ ಇಂದು (ಗುರುವಾರ ಫೆಬ್ರವರಿ 19) ಅಸ್ಸಾಂಗೆ ತೆರಳಿದ್ದಾರೆ.
ಅಸ್ಸಾಂಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು, ಅಸ್ಸಾಂನ ಗುವಾಹಟಿಯ ನೀಲಾಚಲ ಬೆಟ್ಟದಲ್ಲಿರುವ ಪವಿತ್ರ ಶಕ್ತಿಪೀಠವಾದ ಕಾಮಾಕ್ಯ ದೇವಿ ದೇವಾಲಯಕ್ಕೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಭೇಟಿ ನೀಡಿ, ದೇವಿಯ ದಿವ್ಯಾನುಗ್ರಹ ಪಡೆದು ನಾಡಿನ ಸಮಸ್ತ ಜನರ ಕ್ಷೇಮಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸಾರಿಗೆ ನೌಕರರು ನಮ್ಮ ಪರಿಸ್ಥಿತಿ ಅರ್ಥ ಮಾಡಿಕೊಂಡು ನಡೆಯಬೇಕು: ಡಿಕೆಶಿ
