Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎಐ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ: ಪ್ರಿಯಾಂಕ್‌ ಖರ್ಗೆ
  • National
  • Politics
  • ದೆಹಲಿ

ಎಐ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ: ಪ್ರಿಯಾಂಕ್‌ ಖರ್ಗೆ

Praja Vahini February 19, 2026 1 minute read
WhatsApp Image 2026-02-19 at 14.31.55
Spread the love

ದೆಹಲಿ: ಕೃತಕ ಜಾಣ್ಮೆ ಮತ್ತು ಡೀಪ್‌ ಟೆಕ್ನಾಲಜಿ ಕ್ಷೇತ್ರಗಳಲ್ಲಿ ಕರ್ನಾಟಕವು ಪ್ರಭಾವಶಾಲಿಯಾಗಿ ಬೆಳೆಯುತ್ತಿರುವುದನ್ನು ಇಲ್ಲಿ ನಡೆಯುತ್ತಿರುವ ʼಭಾರತ ಕೃತಕ ಬುದ್ಧಿಮತ್ತೆ ಪ್ರಭಾವ ಶೃಂಗಸಭೆʼಯಲ್ಲಿ   ಎಲೆಕ್ಟ್ರಾನಿಕ್ಸ್, ಐಟಿ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಜಾಗತಿಕ ದಿಗ್ಗಜರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ಜಾಗತಿಕ ಉದ್ಯಮ ದಿಗ್ಗಜರು, ಸಂಶೋಧಕರು ಮತ್ತು ನವೋದ್ಯಮ ಸ್ಥಾಪಕರ ಜೊತೆಗೆ ಸಚಿವರು ವ್ಯಾಪಕ ಸಮಾಲೋಚನೆ ನಡೆಸಿದರು.

ಶೃಂಗಸಭೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, “ಕೃತಕ ಜಾಣ್ಮೆ ಕ್ಷೇತ್ರದಲ್ಲಿ ಪ್ರಗತಿಯ ದಾಪುಗಾಲು ಹಾಕುತ್ತಿರುವ ಕರ್ನಾಟಕವು ಮುಂಚೂಣಿ ಸ್ಥಾನ ಕಾಯ್ದುಕೊಂಡಿದೆ. ಹಾರ್ವೆ ಎಐ ಮತ್ತು ಆಂಥ್ರೊಪಿಕ್‌ನಂತಹ ಈ ವಲಯದ ಜಾಗತಿಕ   ದೈತ್ಯ ಕಂಪನಿಗಳು   ರಾಜ್ಯದಲ್ಲಿ ಈಗಾಗಲೆ ನೆಲೆವೂರಿವೆ. ವಾಲ್ಟ್ ಡಿಸ್ನಿ ಕಂಪನಿಯು ಬೆಂಗಳೂರಿನಲ್ಲಿ ತನ್ನ ʼಎಐʼ ಜಾಲ ವಿಸ್ತರಿಸುತ್ತಿದೆ. ʼಎಐʼ ಪ್ರತಿಭೆಗಳಿಗೆ ಬೆಂಗಳೂರು ಜಾಗತಿಕವಾಗಿ ಅಗ್ರ ಸ್ಥಾನದಲ್ಲಿದೆ. ರಾಜ್ಯ ಸರ್ಕಾರವು ₹ 1 ಕೋಟಿವರೆಗಿನ ಅನುದಾನದ ಮೂಲಕ ನವೋದ್ಯಮಗಳನ್ನು ಪ್ರೋತ್ಸಾಹಿಸುತ್ತಿದೆ. ʼಎಐʼ ನ ಹೊಣೆಗಾರಿಕೆಯುತ ಬಳಕೆ  ಖಚಿತಪಡಿಸಿಕೊಳ್ಳಲು,   ಕರ್ನಾಟಕವು ಈ ಕ್ಷೇತ್ರದ ಜಾಗತಿಕ ಮುಖಂಡರು ಮತ್ತು ಸಂಶೋಧಕರ ಜೊತೆಗೆ ನಿಕಟ ಸಂಪರ್ಕದಲ್ಲಿ ಇದೆ ಎಂದು ಹೇಳಿದರು.

ಆಸ್ಪತ್ರೆ ಕಾರ್ಯನಿರ್ವಹಣೆಗೆ ಸುಧಾರಿತ ಎಂಟರ್‌ಪ್ರೈಸ್ ʼಎಐʼ ಅನ್ನು ಪ್ರಾಯೋಗಿಕವಾಗಿ ಬಳಸಿಕೊಳ್ಳಲು ಎಚ್‌ ಕಂಪನಿ ಮತ್ತು ಬೆಂಗಳೂರಿನ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜ್ ಮತ್ತು ಸೇಂಟ್ ಜಾನ್ಸ್ ಸಂಶೋಧನಾ ಸಂಸ್ಥೆ‌ ನಡುವಣ ಒಪ್ಪಂದಕ್ಕೆ ಸಹಿ ಹಾಕುವುದಕ್ಕೆ ಸಚಿವರು ಸಾಕ್ಷಿಯಾದರು. ಇದನ್ನೂ ಓದಿ: ಕಸ ತೆಗಿದೆ ಹೋದ್ರೆ ಜನ ಬಿಜೆಪಿಯವರಿಗೆ ಉಗಿಯೋದು: ಡಿಕೆಶಿ

ಕರ್ನಾಟಕ ಮತ್ತು ಜಾಗತಿಕ ಉದ್ಯಮಗಳ ನಡುವೆ ತಂತ್ರಜ್ಞಾನ ಸಹಯೋಗ, ಹೂಡಿಕೆ ಪಾಲುದಾರಿಕೆ ಮತ್ತು ನಾವೀನ್ಯತೆ ಆಧಾರಿತ ಬೆಳವಣಿಗೆ ಬಲಪಡಿಸುವ ಕುರಿತ ಚರ್ಚೆಗಳಿಗೆ ವೇದಿಕೆ ಕಲ್ಪಿಸಿದ್ದ ಅಮೆರಿಕ – ಭಾರತ ವಾಣಿಜ್ಯ ಮಂಡಳಿಯು (ಯುಎಸ್ಐಬಿಸಿ) ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ಖರ್ಗೆ ಭಾಗವಹಿಸಿದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಕಸ ತೆಗಿದೆ ಹೋದ್ರೆ ಜನ ಬಿಜೆಪಿಯವರಿಗೆ ಉಗಿಯೋದು: ಡಿಕೆಶಿ
Next: ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆ ತಪಾಸಣೆ

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.