ಬೆಂಗಳೂರು: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಅವರ ಜಯಂತಿ ಪ್ರಯುಕ್ತ ನಿನ್ನೆ (ಗುರುವಾರ ಫೆ.19) ನಡೆದ ಬೃಹತ್ ಮೆರವಣಿಗೆ ವೇಳೆಯಲ್ಲಿ ಪಂಕಾ ಮಸೀದಿ ಮಾರ್ಗವಾಗಿ ಹೋಗುವಾಗ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ.
ಇನ್ನು ಕಲ್ಲು ತೂರಾಟ ಹಾಗೂ ಚಪ್ಪಲಿ ತೂರಾಟ ಮಾಡಿರೋದು ಕಂಡನಿಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಆಕ್ರೋಶ ಅವರ ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್ Indian National Congress – Karnataka ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದರೆ, ಇನ್ನು ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.
ಈ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಿಂದೂಗಳ ಹಬ್ಬ ಮತ್ತು ಮೆರವಣಿಗೆಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಇಂತಹ ನಿರಂತರ ದಾಳಿಗಳು ವ್ಯವಸ್ಥಿತ ಪಿತೂರಿಯಂತೆ ಕಾಣುತ್ತಿದೆ. ರಾಜ್ಯ ಸರ್ಕಾರ ತಮ್ಮ ಪರ ನಿಲ್ಲಲಿದೆ ಎನ್ನುವ ಧೈರ್ಯವಿಲ್ಲದೆ ಇಂತಹ ಪುಂಡಾಟಿಕೆ ನಡೆಯುವುದು ಸಾಧ್ಯವಿಲ್ಲ. ಇದನ್ನೂ ಓದಿ: ಗಂಡು ಚಿರತೆ ಮೃತದೇಹ ಪತ್ತೆ, ಭಯಭೀತರಾದ ಜನತೆ
ಈಗಲಾದರೂ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಸರ್ಕಾರ ತನ್ನ ಓಲೈಕೆ ರಾಜಕೀಯವನ್ನು ಬಿಟ್ಟು, ರಾಷ್ಟ್ರದ ಅಸ್ಮಿತೆಯಾಗಿರುವ ಶಿವಾಜಿ ಮಹಾರಾಜರ ಗೌರವಕ್ಕೆ ಧಕ್ಕೆ ತಂದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು. ಮಾನ್ಯ ಮುಖ್ಯಮಂತ್ರಿಗಳೇ, ಹಿಂದೂ ಸಮಾಜದ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಮ್ಮ ಆರಾಧ್ಯ ಪುರುಷರ, ನಾಡಿನ ಅಸ್ಮಿತೆಯ ವಿಷಯದಲ್ಲಿ ಸುಮ್ಮನಿರುವ ಪ್ರಶ್ನೆಯೇ ಇಲ್ಲ! ಎಂದಿದ್ದಾರೆ.
