ಬೆಂಗಳೂರು: ಜಿಬಿಎ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೆ ಇಂದು (ಶುಕ್ರವಾರ ಫೆ. 20) ಬೆಳಿಗ್ಗೆ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ಈಜೀಪುರ ಮೇಲ್ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಗಮನಿಸಿ, ಹೆಚ್ಚಿನ ಯಂತ್ರೋಪಕರಣಗಳು ಹಾಗೂ ಸಿಬ್ಬಂದಿಯನ್ನು ಬಳಸಿ ಎಲ್ಲಾ ಕಾರ್ಯಚಟುವಟಿಕೆಗಳನ್ನು ಏಕಕಾಲದಲ್ಲಿ ನಡೆಸಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಇದೇ ವೇಳೆ ಸರ್ಜಾಪುರ ರಸ್ತೆ, ಕೋರಮಂಗಲ 80 ಅಡಿ ರಸ್ತೆ, ಪಾಮ್ ಗ್ರೋವ್ ರಸ್ತೆ, ಸುಲ್ತಾನ್ ಪೇಟೆ ರಸ್ತೆ ಹಾಗೂ ಶಿರಸಿ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಬಾಕಿ ಕೆಲಸಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ನಕಲಿತನಕ್ಕೆ ಬ್ರೇಕ್ ಹಾಕಲು ಕೆಎಂಎಫ್ ಮಾಸ್ಟರ್ ಪ್ಲಾನ್!
ಪರಿಶೀಲನೆ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ರಮೇಶ್ ಕೆ.ಎನ್, ಮುಖ್ಯ ಅಭಿಯಂತರರಾದ ರವಿ, ಡಾ. ರಾಘವೇಂದ್ರ ಪ್ರಸಾದ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
