ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಬುಧವಾರ ಫೆ. 25) ಉಡುಪಿ ಪ್ರವಾಸವನ್ನು ಕೈಗೊಂಡಿದ್ದು, ಹಲವಾರು ಕಾಮಗಾರಿಗಳು ಹಾಗೂ ಕಟ್ಟಡಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅದರಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಉಡುಪಿ ವತಿಯಿಂದ ಇಂದು ಕಾರ್ಕಳದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ನೂತನ ಡಾ.ಬಿ.ಆರ್.ಅಂಬೇಡ್ಕರ್ ಭವನ ಕಟ್ಟಡವನ್ನು ಉದ್ಘಾಟಿಸಿ, ಶುಭ ಹಾರೈಸಿದರು.
ಈ ಸಂರ್ಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೋಯ್ಲಿ, ಮಾಜಿ ಸಚಿವರು, ಶಾಸಕರು ಆದ ಸುನೀಲ್ ಕುಮಾರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಕರ್ನಾಟಕ ಆರೋಗ್ಯ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ: ಡಿಕೆಶಿ
