ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 2023ನೇ ಸಾಲಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಂದ ಗೆದ್ದು ಅಧಿಕಾರಿಗಳ ಗದ್ದುಗೆ ಏರಿದ ಮೇಲೆ ರಾಜ್ಯದ ಜನತೆಗೆ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿದೆ.
ಈಗಾಗಲೇ ರಾಜ್ಯದ ಜನತೆಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದು, ಇದೀಗ ಪಂಚ ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೊರೆಯಾಗುತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ.
ಹೌದು, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಈಗಾಗಲೇ ರಾಜ್ಯದಲ್ಲಿ ಎಲ್ಲರ ಮನೆಗೆದ್ದು ಇದೀಗ ರಾಜ್ಯ ಸರ್ಕಾರಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತವೆ ಎಂದು ಸ್ವತಃ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಈ ಕುರಿತು ಇಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 200 ಯೂನಿಟ್ ಉಚಿತ ಕರೆಂಟ್, ಗೃಹಲಕ್ಷ್ಮಿ, ಫ್ರೀ ಬಸ್, ಅನ್ನಭಾಗ್ಯ, ಶಕ್ತಿಯೋಜನೆಯಂತಹ ಗ್ಯಾರಂಟಿಗಳನ್ನ ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ ನಿಮಗೆ ಮಾನಸಿಕವಾಗಿ ಧೈರ್ಯ ತುಂಬಲು ಹಾಗೂ ಆರ್ಥಿಕವಾಗಿ ಶಕ್ತಿ ತುಂಬಲು ಇಂತಹ ದೊಡ್ಡ ತೀರ್ಮಾನವನ್ನ ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು. ಇದನ್ನೂ ಓದಿ: ವಿಕ್ಟೋರಿಯಾದ ಟ್ರಾಮಾ ಕೇರ್ ಸೆಂಟರ್ನಲ್ಲಿ ಅಂಗಾಂಗ ಕಸಿ ಯಶಸ್ವಿ
ಜೇಬಲ್ಲಿ 10 ರೂಪಾಯಿ ಇದ್ರೆ ಕೊಡೋನು 100 ರೂಪಾಯಿ ಕೊಡೋಕೆ ಮುಂದೆ ಬರ್ತಾನೆ. ಆದ್ದರಿಂದ ಸರ್ಕಾರಕ್ಕೆ ಹೊರೆಯಾದ್ರೂ ಗ್ಯಾರಂಟಿಗಳನ್ನ ಜಾರಿಗೊಳಿಸಿದೆ ಎಂದರು.
