ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ವಿದ್ಯಾರ್ಥಿಗಳು ಇಂದಿನಿಂದ ಏಪ್ರಿಲ್ 17ರ ವರೆಗೆ ಪರೀಕ್ಷೆ ಬರೆಯಲಿದ್ದಾರೆ.
ಹೌದು, ಇಂದಿನಿಂದ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದ್ದು ಪರೀಕ್ಷೆಯ ಶಾಲಾ ಕಾಲೇಜುಗಳ ಸುತ್ತಮುತ್ತಲು ಬಿಗಿ ಭದ್ರತೆಯಿಂದ ಪರೀಕ್ಷೆಯನು ನಡೆಸಲಾಗುತ್ತಿದೆ. ಈ ಮಹತ್ವದ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಂಪೂರ್ಣ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.
ಇನ್ನು ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಸಲಾಗುತ್ತಿದ್ದು, ಯಾವುದೇ ಅಕ್ರಮ ಅಥವಾ ಉಲ್ಲಂಘನೆ ತಡೆಯಲು ಬಿಗಿ ಭದ್ರತೆ ಜಾರಿಗೆ ಬಂದಿದೆ. ಇದನ್ನೂ ಓದಿ: ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳನ್ನು ಕಿತ್ತೊಗೆಯುವ ಕಾಲ ಸನ್ನಿಹಿತ: ಮುಖ್ಯಮಂತ್ರಿ ಚಂದ್ರು
ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ.
