ಮೃತ ಬಾಣಂತಿ ಹೂಗಾರ್ ನಂದಿನಿ ಕುಟುಂಬಕ್ಕೆ 5 ಲಕ್ಷ ಚೆಕ್ ವಿತರಣೆ

ಮೃತ ಬಾಣಂತಿ ಹೂಗಾರ್ ನಂದಿನಿ ಕುಟುಂಬಕ್ಕೆ 5 ಲಕ್ಷ ಚೆಕ್ ವಿತರಣೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಜಿಲ್ಲೆಯ ನಾಲ್ಕು ಬಾಣಂತಿಯರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿಗಳಂತೆ 20 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಿದ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವರು ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರು ಧನ್ಯವಾದಗಳು ತಿಳಿಸಿದ್ದಾರೆ.

ಮೃತಪಟ್ಟ ಬಾಣಂತಿಯರ 4 ಜನರಲ್ಲಿ ಒಬ್ಬರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಾಣಾಪುರ ಗ್ರಾಮದ ನಿವಾಸಿಯಾದ ಹೂಗಾರ್ ನಂದಿನಿ ಅವರ ಕುಟುಂಬ ಸದಸ್ಯರಿಗೆ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ವಿಧಾನಸಭಾ ಅಧಿವೇಶನದಲ್ಲಿರುವ ಹಿನ್ನೆಲೆಯಲ್ಲಿ ಅವರ ಸೂಚನೆ ಮೇರೆಗೆ ಮಾನ್ಯ ಶಾಸಕ ಬಿ.ನಾಗೇಂದ್ರ ಆಪ್ತರಾದ ಅಣ್ಣ ನಾಗರಾಜ್ ಅವರು ಬಾಣಾಪುರ ಗ್ರಾಮದ ನಂದಿನಿ ಅವರ ಮನೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ 5 ಲಕ್ಷ ರೂಪಾಯಿಗಳ ಚೆಕ್ಕನ್ನು ವಿತರಣೆ ಮಾಡಿದರು. ಇದನ್ನೂ ಓದಿ: ಕೇಂದ್ರ ಸಚಿವರನ್ನ ಭೇಟಿ ಮಾಡಿದ ಸದಸ್ಯ ಮಂಜುನಾಥ್

ನಂತರ ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಬಿ.ನಾಗೇಂದ್ರ ಅವರು ಬಳ್ಳಾರಿ ಜಿಲ್ಲೆಯ ನಾಲ್ಕು ಜನ ಬಾಣಂತಿಯರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಆಪ್ತರಾದ ಗೋವರ್ಧನ್ ರೆಡ್ಡಿ, ಮೋಕ ಆರ್.ಐ ಸಿಕಂದರ್, ಗ್ರಾಮ ಲೆಕ್ಕಾಧಿಕಾರಿಗಳಾದ ಅನಿಲ್ ಬಿ.ವಿ, ಸ್ವಾಗತ, ಗ್ರಾಮ ಪಂಚಾಯತ್ ಅಧ್ಯಕ್ಷ ವೆಂಕಟೇಶ್ ಕಾಂಗ್ರೆಸ್ ಪಕ್ಷದ ಮುಖಂಡರಾದ ವಿ.ಎನ್ ಶ್ರೀನಾಥ್, ಪ್ರಕಾಶ್ ಗೌಡ, ಪಂಪನಗೌಡ, ಪಿ. ರಂಗಯ್ಯ, ಗ್ರಾಮ ಪಂಚಾಯತ್ ಸದಸ್ಯರಾದ ರಾಮದುರ್ಗ ವೆಂಕಟೇಶ್ ಹಾಗೂ ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Related