ರಾಜ್ಯದಲ್ಲಿಇನ್ನೂ 5 ದಿನ ವರುಣನ ಆರ್ಭಟ

ರಾಜ್ಯದಲ್ಲಿಇನ್ನೂ 5 ದಿನ ವರುಣನ ಆರ್ಭಟ

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ಇನ್ನೂ  ಐದು ದಿನಗಳ ಕಾಲ ಮಳೆ ಬರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿರುವ ಪರಿಣಾಮ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಕೆಲ ಜಿಲ್ಲೆಗಳಿಗೆ ಹವಮಾನ ಇಲಾಖೆ ಅಲರ್ಟ್ ಘೋಷಣೆ ಮಾಡಿದ್ದು, ಮುಂಜಾಗೃತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

 

Related