ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದಲ್ಲಿ ಇಎಸ್‌ಐ ಆಸ್ಪತ್ರೆ ಮತ್ತು ಎರಡು ಕ್ರೀಡಾಂಗಣಗಳ ನಿರ್ಮಾಣದ ಮಹತ್ವದ ಯೋಜನೆಗಳ ಕನಸು ಶೀಘ್ರದಲ್ಲೇ ಸಾಕಾರಗೊಳ್ಳಲಿದೆ ಎಂದು ಸಂಸದ ಡಾ.ಕೆ.ಸುಧಾಕರ್ ರವರು ತಿಳಿಸಿದ್ದಾರೆ.
ಈ ಕುರಿತಂತೆ ನಗರದಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಇದಕ್ಕೆ ಸ್ಪಂದನೆ ದೊರೆಯುವ ಜೊತೆಗೆ ಅನುದಾನ ನಿಗದಿ ಮಾಡುವ ಬಗ್ಗೆಯೂ ಭರವಸೆ ಸಿಕ್ಕಿದೆ.
ಕೇಂದ್ರ ಕಾರ್ಮಿಕ ಮತ್ತು ಕ್ರೀಡಾ ಸಚಿವರಾದ ಮನ್‌ಸುಖ್ ಮಾಂಡವೀಯ ಅವರನ್ನು ಭೇಟಿ ಮಾಡಿ ಈ ಯೋಜನೆಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲೇ ಇಎಸ್‌ಐ ಆಸ್ಪತ್ರೆ ಬಗ್ಗೆ ಜನರಿಗೆ ಭರವಸೆ ನೀಡಿದೇ. ಇದನ್ನೂ ಓದಿ: 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್..!
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಪ್ರದೇಶಗಳಿದ್ದು, ಹೆಚ್ಚು ಕಾರ್ಮಿಕರಿದ್ದಾರೆ. ಆದರೆ ಕಾರ್ಮಿಕರಿಗೆ ಸೂಕ್ತವಾದ ಆರೋಗ್ಯ ಸೌಲಭ್ಯ ದೊರೆಯುತ್ತಿಲ್ಲ. ಕ್ಷೇತ್ರದಲ್ಲೇ ಇಎಸ್‌ಐ ಆಸ್ಪತ್ರೆ ನಿರ್ಮಿಸುವುದರಿಂದ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಕಡಿಮೆ ದರದ ಹಾಗೂ ಉಚಿತ ಚಿಕಿತ್ಸೆ ಸಿಗಲಿದೆ. ಈ ಕುರಿತು ಶೀಘ್ರ ಕ್ರಮ ವಹಿಸಬೇಕೆಂದು ಡಾ.ಕೆ.ಸುಧಾಕರ್ ಮನವಿ ಮಾಡಿದರು.
ಈ ಯೋಜನೆಗೆ ಕೇಂದ್ರ ಸಚಿವರು ಒಪ್ಪಿಗೆ ನೀಡಿದ್ದಾರೆ. ಒಳರೋಗಿಗಳ ಸಂಖ್ಯೆಯ ಆಧಾರದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಯಾವುದಾದರೂ ಒಂದು ತಾಲೂಕಿನಲ್ಲಿ ಇಎಸ್‌ಐ ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ.
ಇದೇ ವೇಳೆ ಕ್ಷೇತ್ರಕ್ಕೆ ಕ್ರೀಡಾಂಗಣಗಳ ಅಗತ್ಯದ ಕುರಿತು ಡಾ.ಕೆ.ಸುಧಾಕರ್ ಪ್ರಸ್ತಾಪಿಸಿದರು. ಖೇಲೋ ಇಂಡಿಯಾ ಯೋಜನೆಯಡಿ, ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರದಲ್ಲಿ, ಒಟ್ಟು ಎರಡು ಕ್ರೀಡಾಂಗಣ ನಿರ್ಮಿಸಲು ಸಚಿವ ಮನ್‌ಸುಖ್ ಮಾಂಡವೀಯ ಒಪ್ಪಿಗೆ ನೀಡಿದರು. ಇದಕ್ಕಾಗಿ ವರ್ಷಕ್ಕೆ 10 ಕೋಟಿ ರೂ. ನಂತೆ, ಎರಡು ಕ್ರೀಡಾಂಗಣಗಳಿಗೆ ತಲಾ 50 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು ಎಂದರು.