ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ

ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ

ಬೆಂಗಳೂರು: ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ಹೋರಾಟದಲ್ಲಿ ವೀರ ಮರಣ ಹೊಂದಿದ ಕರ್ನಾಟಕ ಮೂಲದ ಕ್ಯಾಪ್ಟನ್ ಪ್ರಜ್ವಲ್ ಅವರ ಮರಣ ಹೊಂದಿದ್ದು, ಕ್ಯಾಪ್ಟನ್ ಪ್ರಜ್ವಲ್ ಅವರ ಕುಟುಂಬಕ್ಕೆ ಕರ್ನಾಟಕ ಸರ್ಕಾರ 50 ಲಕ್ಷ ಪರಿಹಾರ ನೀಡುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಹೇಳಿದ್ದರು.

ಅದರಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕ್ಯಾಪ್ಟನ್ ಪ್ರಜ್ವಲ್ ಅವರ ಕುಟುಂಬಕ್ಕೆ50 ಲಕ್ಷ ಪರಿಹಾರ ಚೆಕ್ಕನ್ನು ನೀಡುತ್ತಿದ್ದಾರೆ.

ಹೌದು, ಜಮ್ಮು- ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ  ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ. ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ಬರೆದುಕೊಂಡಿದ್ದಾರೆ.

 

 

 

 

 

Related