ಬೆಂಗಳೂರು: ಇತ್ತೀಚಿಗೆ ಕರ್ನಾಟಕ ರಾಜ್ಯದಲ್ಲಿ ಇರುವ ಬಿಜೆಪಿ ಶಾಸಕರಿಗೆ ಅದೇನು ಗೊತ್ತಿಲ್ಲ ಶನಿ ಕಾಟ ತಪ್ಪುವುದಿಲ್ಲವೇನೋ ಅನಿಸ್ತಾ ಇದೆ.
ಹೌದು, ಕರ್ನಾಟಕ ರಾಜ್ಯದಲ್ಲಿರುವ ಬಿಜೆಪಿ ಶಾಸಕರು ಒಂದಲ್ಲ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಗಳನ್ನು ಎದುರಿಸುತ್ತಲೇ ಇದ್ದಾರೆ. ಅದರಂತೆ ಇದೀಗ ಬಿಜೆಪಿಯ ಶಾಸಕ ಮುನಿರತ್ನ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಇದೀಗ ಸಂಕಷ್ಟ ಎದುರಾಗಿದ್ದು, ಕರ್ನಾಟಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿಐಡಿ ಎಸ್ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ತಿರಸ್ಕರಿಸಿ, ಮರು ತನಿಖೆ ನಡೆಸುವಂತೆ ಆದೇಶಿಸಿದೆ. ತೆ ಹೆಚ್ಚಾಗಿದೆ.
ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಸಲ್ಲಿಸಿದ್ದ ದೂರಿನ ತನಿಖೆ ಪೂರ್ಣಗೊಳಿಸಿದ ಎಸ್ಐಟಿ ಅಧಿಕಾರಿಗಳು ಸಾಕ್ಷಿಯ ಅಭಾವವೆಂದು ಉಲ್ಲೇಖಿಸಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಇದನ್ನು ಪ್ರಶ್ನಿಸಿ ನಾರಾಯಣಸ್ವಾಮಿ ಮರು ಅರ್ಜಿ ಸಲ್ಲಿಸಿದ್ದರು. ದೂರುದಾರರ ಪರ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ವಾದ ಮಂಡಿಸಿ, ಧ್ವನಿಮುದ್ರಣ ಸೇರಿದಂತೆ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿದೆ. ಆದರೂ ಪೊಲೀಸರು ಸಮರ್ಪಕ ತನಿಖೆ ನಡೆಸದೆ ‘ಬಿ’ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ: ಸಿಎಂ
ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುವ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್. ಶಿವಕುಮಾರ್ ವಾದಗಳನ್ನು ಆಲಿಸಿ, ‘ಬಿ’ ರಿಪೋರ್ಟ್ ಅನ್ನು ರದ್ದುಗೊಳಿಸಿ, ಪ್ರಕರಣದ ಮುಂದಿನ ತನಿಖೆ ನಡೆಸುವಂತೆ ಸಿಐಡಿ ಎಸ್ಐಟಿಗೆ ನಿರ್ದೇಶನ ನೀಡಿದರು. ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಲಾಗಿದೆ. ಈ ಆದೇಶದಿಂದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
