ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ ಮಾರ್ಚ್ 06 ) 17 ನೇ ಬಜೆಟ್ ಮಂಡನೆ ಮಂಡಿಸಿ ಇತಿಹಾಸ ಸೃಷ್ಟಿಸಿದ್ದು, ಇದೀಗ ಈ ಬಜೆಟ್ ಮಂಡನೆಯ ವಿರುದ್ಧ ರಾಜ್ಯ ಬಿಜೆಪಿಯು ಕರ್ನಾಟಕದ ಜನತೆಗೆ ಖಾಲಿ ಚೆಂಬು ನೀಡಿದೆ ಎಂದು ಪ್ರತಿಭಟನೆ ನಡೆಸಿದೆ.
ವಿಧಾನಸೌಧದಲ್ಲಿ ಖಾಲಿ ಚಂಬು ಹಿಡಿದು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಹರ ಹಾಕಿದ್ದಾರೆ.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ರಾಜ್ಯ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ಆಕ್ಷೇಪಿಸಿದರು. ಕನ್ನಡಿಗರಿಗೆ ಖಾಲಿ ಚೊಂಬು ಕೊಟ್ಟ ಕಾಂಗ್ರೆಸ್ ಸರ್ಕಾರ ಎಂಬ ಪೋಸ್ಟರ್ ಹಿಡಿದು ಎಲ್ಲರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಯುವಕರಿಗೆ ಮೋಸ ಮಾಡಿದ ಸರಕಾರಕ್ಕೆ ಧಿಕ್ಕಾರ, 3 ವರ್ಷದಲ್ಲಿ ಮೂರೂವರೆ ಲಕ್ಷ ಕೋಟಿ ಸಾಲ ಮಾಡಿದ ಸರಕಾರಕ್ಕೆ ಧಿಕ್ಕಾರ, ಬಜೆಟ್ಟಂತೆ ಬಜೆಟ್ ಖಾಲಿ ಚೊಂಬಿನ ಬಜೆಟ್- ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು. ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ, ಕನ್ನಡಿಗರಿಗೆ ಖಾಲಿ ಚೊಂಬು ನೀಡಿದ ಸಿದ್ದರಾಮಯ್ಯನವರಿಗೆ ಧಿಕ್ಕಾರ ಎಂದು ಕೂಗಿದರು. ರಾಜ್ಯದ ರೈತರಿಗೆ ಖಾಲಿ ಚೊಂಬು ಕೊಟ್ಟ ಸರಕಾರಕ್ಕೆ ಧಿಕ್ಕಾರ ಎಂದು ಕೂಗಿದರು.
ಈ ಸಂರ್ಭದಲ್ಲಿ ಬಿಜೆಪಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್, ಉಪ ನಾಯಕ ಅರವಿಂದ ಬೆಲ್ಲದ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದ್ದರು.
