ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಮಾರ್ಚ್ 06) ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 17ನೇ ಬಾರಿಗೆ ಬಜೆಟ್ ಮಂಡನೆ ಮಾಡಿ ಇತಿಹಾಸ ಸೃಷ್ಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಚ್ಚರಿ ಹೇಳಿಕೆಯನ್ನು ಹೇಳಿದ್ದಾರೆ.
ಹೈಕಮಾಂಡ್ ಏನಾದರು ನನಗೆ ಅವಕಾಶ ಕೊಟ್ಟರೆ ನಾನು ಇನ್ನೆರಡು ಬಜೆಟ್ ಅನ್ನು ಕೂಡ ನಾನೇ ಮಂಡಿಸುತ್ತೇನೆ ಆದರೆ ಇದೆಲ್ಲಾ ಹೈಕಮಾಂಡ್ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಮೈಸೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೊ ಏನೋ ಹೇಳುತ್ತಾರೆ ಎಂಬುದು ನನಗೆ ಮುಖ್ಯ ಅಲ್ಲ. ನನಗೆ ಹೈಕಮಾಂಡ್ ತೀರ್ಮಾನವಷ್ಟೇ ಮುಖ್ಯ. ಹೈಕಮಾಂಡ್ ಬಗ್ಗೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದಿದ್ದಾರೆ. ಇದನ್ನೂ ಓದಿ: ಮೋದಿಯವರು ಸಾಲ ಮಾಡದೇ ದೇಶ ನಡೆಸ್ತಿದರಾ ಅದಕ್ಕೆ ಇವರೇ ಬೇಕಾ?: ಪ್ರಿಯಾಂಕ್ ಖರ್ಗೆ
ಮೈಸೂರಿನ ಜನ ಮಾತ್ರ ಅಲ್ಲ, ಇಡೀ ನಾಡಿನ ಜನ ನಾನು ಇರಬೇಕೆಂದು ಬಯಸಿದ್ದಾರೆ. ಈ ಬಗ್ಗೆ ಅಂತಿಮ ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧ. ಬಜೆಟ್ನ ದಾಖಲೆಗಳ ಮೇಲೆ ನಂಬಿಕೆ ಇಲ್ಲ. ಆದರೆ ಇನ್ನರೆಡು ಬಜೆಟ್ ಮಂಡಿಸುವ ಅವಕಾಶ ಸಿಕ್ಕರೆ ಮಂಡಿಸುತ್ತೇನೆ. ಎಲ್ಲವನ್ನೂ ತೀರ್ಮಾನ ಮಾಡುವುದು ಹೈಕಮಾಂಡ್. ಈ ವಿಚಾರದಲ್ಲಿ ಏನೇ ಹಿಂದೆ ಮುಂದೆ ಪ್ರಶ್ನೆ ಕೇಳಿದರು ನನ್ನ ಉತ್ತರ ಹೈಕಮಾಂಡ್. ಜನ ಅವಕಾಶ ಕೊಟ್ಟರೆ ಮಂಡಿಸುತ್ತೇನೆ ಎಂದಿದ್ದಾರೆ.
