ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಶನಿವಾರ ಮಾರ್ಚ್ 07) ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದ ಶ್ರೀ ದಂಡಿಮಾರಮ್ಮ ಮತ್ತು ಸಿದ್ದಪ್ಪಾಜಿ ಸೇವಾ ಸಮಿತಿ ಆಯೋಜಿಸಿದ್ದ “ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಬಕಳಶದ ಪ್ರತಿಷ್ಠಾಪನೆಗೆ ಚಾಲನೆ ನೀಡಿದರು.
ಐತಿಹಾಸಿಕ ಬಜೆಟ್ ಮಂಡನೆ ನಡೆಸಿದ ನಂತರ ಇದೆ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ಜಿಲ್ಲೆಯಾದ ಮೈಸೂರಿಗೆ ತೆರಳಿದ ಸಂದರ್ಭದಲ್ಲಿ ಸಾವಿರಾರು ಜನ ತಮ್ಮ ನೆಚ್ಚಿನ ನಾಯಕನನ್ನು ನೋಡಲು ನೆರೆದಿದ್ದರು.
ಇನ್ನು ತವರು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತವನ್ನು ಕೋರಲಾಗಿದ್ದು, ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಕಾಂಗ್ರೆಸ್ ಮುಖಂಡರು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಈ ಸಂರ್ಭದಲ್ಲಿ ವಿಧಾನ ಪರಿಷತ್ ಸದಸ್ಯರುಗಳಾದ ಯತೀಂದ್ರ ಸಿದ್ದರಾಮಯ್ಯ, ತಿಮ್ಮಯ್ಯ, ಶಿವಕುಮಾರ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪ ಅಮರನಾಥ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯಕುಮಾರ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
