Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಸಿಎಂ
  • Politics
  • State
  • ಮೈಸೂರು

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಸಿಎಂ

Praja Vahini March 7, 2026 1 minute read
WhatsApp Image 2026-03-07 at 17.17.37
Spread the love

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ತವರು ಜಿಲ್ಲೆಯಲ್ಲಿ ಇಂದು ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಇಂದು (ಶನಿವಾರ ಮಾರ್ಚ್‌ 07) ಭಾಗವಹಿಸಿ ಮಾತನಾಡಿದ ಅವರು, ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು. 1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ಇದನ್ನೂ ಓದಿ: ಜನಸ್ನೇಹಿ ಬಜೆಟ್: ಮಲ್ಲಣಗೌಡ

ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು. ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ ಎಂದರು.

ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ

ಶ್ರೀ ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿದ ಮುಖ್ಯಮಂತ್ರಿಗಳು, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು ಎಂದರು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ.  ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ.  ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಜನಸ್ನೇಹಿ ಬಜೆಟ್: ಮಲ್ಲಣಗೌಡ
Next: 218 ಲಕ್ಷ ಕೋಟಿ ಮೋದಿಯವರೇ ಸಾಲ ಮಾಡಿದ್ದಾರೆ, ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

Views:

44

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.