Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 218 ಲಕ್ಷ ಕೋಟಿ ಮೋದಿಯವರೇ ಸಾಲ ಮಾಡಿದ್ದಾರೆ, ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ
  • Politics
  • State
  • ಮೈಸೂರು

218 ಲಕ್ಷ ಕೋಟಿ ಮೋದಿಯವರೇ ಸಾಲ ಮಾಡಿದ್ದಾರೆ, ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

Praja Vahini March 7, 2026 1 minute read
WhatsApp Image 2026-03-07 at 14.18.59
Spread the love

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ (ಮಾರ್ಚ್ 06) 17ನೇ ಬಾರಿಗೆ ಬಜೆಟ್ ಮಂಡಿಸಿ ಇತಿಹಾಸ ಸೃಷ್ಟಿಸಿರುವ ಬೆನ್ನಲ್ಲೇ ತವರು ಜಿಲ್ಲೆಯಾದ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಬಹುದಾಗಿದ್ದು, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವುದೇ ಈ ಬಾರಿಯ ಬಜೆಟ್ ನ ಉದ್ದೇಶವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಇಂದು (ಶನಿವಾರ ಮಾರ್ಚ್‌ 07) ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ಅವಧಿಯಲ್ಲಿ ದೇಶದ ಸಾಲ 218 ಲಕ್ಷ ಕೋಟಿ. ಬಿಜೆಪಿಯ ಪ್ರಧಾನಿ ಮೋದಿಯವರು ಸಾಲ ಮಾಡಿದ್ದಾರೆ. ಸಾಲ ಮಾಡದೇ ಅಭಿವೃದ್ಧಿ ಸಾಧ್ಯವಿಲ್ಲ. ಆರ್ಥಿಕ ಹೊಣೆಗಾರಿಕೆ ಕಾಯ್ದೆ ತಿಳಿಸಿರುವ ಮಾನದಂಡಗಳ ಮಿತಿಯಲ್ಲಿ ಸಾಲದ ಪ್ರಮಾಣ ಇದೆ. ಈ ಕಾಯ್ದೆಯಂತೆ ಸಾಲವು ಶೇ. 25 ರಷ್ಟಿರಬೇಕಿದ್ದು, ನಮ್ಮ ಸಾಲದ ಪ್ರಮಾಣ 24.94 ಇದ್ದು, ಮಿತಿಯೊಳಗೇ ಇದೆ. ಕೇಂದ್ರದ ಸಾಲದ ಪ್ರಮಾಣ 218 ಲಕ್ಷ ಕೋಟಿ ವಿದೆ.

ಮೋದಿಯವರು ಅಧಿಕಾರಕ್ಕೆ ಬಂದ ನಂತರ 165 ಲಕ್ಷ ಕೋಟಿ ಸಾಲವನ್ನು ಮಾಡಿದ್ದಾರೆ. ಇದು ಸದರಿ ಕಾಯ್ದೆಯ ಪ್ರಕಾರ 55.6 % ರಷ್ಟು ಇದೆ. ಭಾರತದ ವಿತ್ತೀಯ ಕೊರತೆ 4.4 ರಷ್ಟಿದ್ದು, ಕರ್ನಾಟಕ ರಾಜ್ಯದ ವಿತ್ತೀಯ ಕೊರತೆ 2.95 ರಷ್ಟಿದ್ದು, ಕಾಯ್ದೆಯು ಸೂಚಿಸಿರುವ ಜಿಡಿಪಿಯ ಶೇ. 3 ರ ಮಿತಿಯೊಳಗೆ ಇದೆ. ಕರ್ನಾಟಕದ ಜಿಡಿಪಿ 33,05,500 ಕೋಟಿ ಇದೆ. ಬಿಜೆಪಿಯವರು, ಸರ್ಕಾರ ಹೆಚ್ಚು ಸಾಲ ಮಾಡಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಆರ್ಥಿಕ ಹೊಣೆಗಾರಿಕೆ ಕಾಯ್ದೆಯ ಸೂಚಿಸಿರುವ ಮಾನದಂಡದ ಮಿತಿಯೊಳಗೆ ಸಾಲ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಇದನ್ನೂ ಓದಿ: ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಸಿಎಂ

ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿದೆ

ಈ ಬಾರಿಯ ಬಜೆಟ್ ಸಾಮಾಜಿಕ ನ್ಯಾಯವನ್ನು ಕೇಂದ್ರೀಕರಿಸಿ ಮಾಡಲಾಗಿದ್ದು ಇಡೀ ರಾಜ್ಯದ ಬೆಳವಣಿಗೆಯನ್ನು ಬಜೆಟ್ ನಲ್ಲಿ ನಿರೀಕ್ಷಿಸಲಾಗುತ್ತದೆ, ಸಮಾಜದ ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ನೀಡುವ ಉದ್ದೇಶವನ್ನು ಹೊಂದಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ: ಸಿಎಂ
Next: ಐಸಿಸಿ ಟಿ20 ಕಿರೀಟವನ್ನ ಮುಡಿಗೇರಿಸಿಕೊಂಡ ಟೀಮ್ ಇಂಡಿಯಾ

Views:

45

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.