Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಳ್ಳಾರಿ ಜನತೆಗೆ ಸಿಹಿ ಸುದ್ದಿ ನೀಡಿದ ಸಚಿವ ಎಂ ಬಿ ಪಾಟೀಲ್
  • Bangalore
  • Politics
  • State

ಬಳ್ಳಾರಿ ಜನತೆಗೆ ಸಿಹಿ ಸುದ್ದಿ ನೀಡಿದ ಸಚಿವ ಎಂ ಬಿ ಪಾಟೀಲ್

Praja Vahini March 13, 2026
WhatsApp Image 2026-03-13 at 13.32.04
Spread the love

ಬೆಂಗಳೂರು: ಬಳ್ಳಾರಿ, ಹೊಸಪೇಟೆ, ಹಂಪೆ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು, ಸಿರಗುಪ್ಪ ಮುಂತಾದ ಭಾಗಗಳಿಗೆ ಅನುಕೂಲವಾಗುವಂತೆ ವಿಮಾನ ನಿಲ್ದಾಣ ಬರಬೇಕೆಂಬುದು ಸರಕಾರದ ಉದ್ದೇಶವಾಗಿದೆ. ಹೀಗಾಗಿ ಬಳ್ಳಾರಿಯಿಂದ 19 ಕಿ.ಮೀ. ದೂರದಲ್ಲಿ ಜಾಗವನ್ನು ಗುರುತಿಸಲಾಗಿದೆ. ಇದು ಕಾರ್ಯಸಾಧು ಎನಿಸಿದರೆ ಎಲ್ಲ ಜನಪ್ರತಿನಿಧಿಗಳ ಜತೆ ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಗಂಗಾವತಿಯ ಬಿಜೆಪಿ ಶಾಸಕ ಜನಾರ್ದನ ರೆಡ್ಡಿ ಅವರು ವಿಧಾನಸಭೆಯಲ್ಲಿ ಶುಕ್ರವಾರ ಕೇಳಿದ ಪ್ರಶ್ನೆಗೆ ಅವರು ವಿವರವಾಗಿ ಉತ್ತರಿಸಿದರು.

ಬಳ್ಳಾರಿ ವಿಮಾನ ನಿಲ್ದಾಣದಿಂದ ಆ ಜಿಲ್ಲೆಯ ಜತೆಗೆ ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೂ ಪ್ರಯೋಜನ ಆಗಬೇಕು. ಬಳ್ಳಾರಿ ಏರ್ಪೋರ್ಟ್ ನಿಂದ ನೆರೆಯ ಆಂಧ್ರಪ್ರದೇಶಕ್ಕೂ ಲಾಭವಾಗಲಿದೆ. ಈ ಯೋಜನೆಯ ಸಂಬಂಧ ಸದ್ಯದಲ್ಲೇ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಕರೆದು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಾಧಕಬಾಧಕಗಳನ್ನು ಯೋಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈಗ ಹೊಸದಾಗಿ ಗುರುತಿಸಿರುವ ಸ್ಥಳದಿಂದ ಹೊಸಪೇಟೆಗೆ 33 ಕಿ.ಮೀ., ಹಂಪೆಗೆ 26 ಕಿ.ಮೀ, ಸಂಡೂರಿಗೆ 33 ಕಿ.ಮೀ, ಕೊಪ್ಪಳಕ್ಕೆ 75 ಕಿ.ಮೀ, ಕುರುಗೋಡಿಗೆ 14 ಕಿ.ಮೀ, ತೋರಣಗಲ್ಲಿಗೆ 13 ಕಿ.ಮೀ ಮತ್ತು ಸಿರಗುಪ್ಪಕ್ಕೆ 43 ಕಿ.ಮೀ ಆಗಲಿದೆ. ಆದರೆ ಈಗ ಗುರುತಿಸಿರುವ ಜಾಗವು ವಿಮಾನ ನಿಲ್ದಾಣಕ್ಕೆ ಎಷ್ಟರ ಮಟ್ಟಿಗೆ ಸೂಕ್ತ ಎನ್ನುವುದನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ತೀರ್ಮಾನಿಸಬೇಕು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬೊಮ್ಮಾಯಿ

ವಿಮಾನ ನಿಲ್ದಾಣ ಕಟ್ಟುವಾಗಲೇ ದೂರದೃಷ್ಟಿ ಇರಬೇಕು. ಇಲ್ಲದೆ ಹೋದರೆ ಹುಬ್ಬಳ್ಳಿ, ಬೆಳಗಾವಿ, ವಿಜಯಪುರ ಇಲ್ಲೆಲ್ಲ ಆಗಿರುವ ತಪ್ಪುಗಳೇ ಮುಂದುವರಿಯುತ್ತವೆ. ಬೆಳಗಾವಿ ಮತ್ತು ಹುಬ್ಬಳ್ಳಿ ಏರ್ಪೋರ್ಟ್ ಮಧ್ಯೆ ಕೇವಲ 70 ಕಿ.ಮೀ. ಅಂತರವಿದೆ. ಇವೆರಡೂ ಜಿಲ್ಲೆಗಳಿಗೆ ಅನುಕೂಲವಾಗುವ ಹಾಗೆ ಮಧ್ಯದಲ್ಲಿ ನಿಲ್ದಾಣ ನಿರ್ಮಿಸಿದ್ದರೆ ಪ್ರಯಾಣಿಕರ ದಟ್ಟಣೆ ಪರಿಗಣಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಘೋಷಿಸುತ್ತಿದ್ದರು. ಬೆಳಗಾವಿಯಲ್ಲಿ ಭಾರತೀಯ ವಾಯುಪಡೆ ಇರುವುದು ನಮ್ಮ ಪ್ರಯೋಜನಕ್ಕೆ ಬಂದಿದೆ ಎಂದು ಅವರು ವಾಸ್ತವವನ್ನು ತೆರೆದಿಟ್ಟರು.

About the Author

Praja Vahini

Editor

View All Posts

Spread the love

Post navigation

Previous: ಸಿಎಂ ಒಳ ಮೀಸಲಾತಿ ವಿರೋಧಿಗಳ ಒತ್ತಡಕ್ಕೆ ಮಣಿದಿದ್ದಾರೆ: ಬೊಮ್ಮಾಯಿ
Next: ಸದ್ದಿಲ್ಲದೆ ಇಸ್ಲಾಂ ಧರ್ಮ ಹುಡುಗನ ಮದುವೆಯಾದ ಕುಂಭಮೇಳದ ಸುಂದರಿ

Views:

214

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.