ಬೆಂಗಳೂರು: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಕೆ. ಶಿವನಗೌಡ ನಾಯಕ್, ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ಜಿಲ್ಲಾಧ್ಯಕ್ಷ ಎನ್. ರಾಜಶೇಖರ್ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಅಭ್ಯರ್ಥಿಯು ಬೃಹತ್ ಮೆರವಣಿಗೆಯಲ್ಲಿ ಆಗಮಿಸಿದರು ಮುಖಂಡರು ಮತ್ತು ಕಾರ್ಯಕರ್ತರು ಜೈಕಾರ ಕೂಗಿದರು, ಕಾರ್ಯಕರ್ತರಲ್ಲಿ ಸಂಭ್ರಮ, ಉಲ್ಲಾಸ ಮನೆಮಾಡಿತು.
