Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • BJP ಯಿಂದ ಕಾಂಗ್ರೆಸ್ ಸೇರುತ್ತಿರುವ ಕಾರ್ಯಕರ್ತರನ್ನು ಸ್ವಾಗತಿಸುತ್ತೇನೆ: ಡಿಕೆಶಿ 
  • Politics
  • State
  • ದಾವಣಗೆರೆ

BJP ಯಿಂದ ಕಾಂಗ್ರೆಸ್ ಸೇರುತ್ತಿರುವ ಕಾರ್ಯಕರ್ತರನ್ನು ಸ್ವಾಗತಿಸುತ್ತೇನೆ: ಡಿಕೆಶಿ 

Praja Vahini March 23, 2026
Screenshot_2026-03-23-21-12-44-91_6012fa4d4ddec268fc5c7112cbb265e7
Spread the love

ದಾವಣಗೆರೆ: ಭಾನುವಾರ ರಾತ್ರಿ ಬಿಜೆಪಿಯ ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆಯಾಗಲು ಇನ್ನು ಹಲವರು ಮುಂದಾಗಿದ್ದು, ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲದಿಂದ ಕಾಂಗ್ರೆಸ್ ಸೇರುತ್ತಿರುವವರನ್ನು ನಾವು ಪಕ್ಷಕ್ಕೆ ಸ್ವಾಗತಿಸುತ್ತಿದ್ದೇವೆ. ಇದರ ಜವಾಬ್ದಾರಿಯನ್ನು ಸ್ಥಳೀಯ ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಲ್ಲಿಕಾರ್ಜುನ್ ಅವರಿಗೆ ವಹಿಸಿದ್ದೇನೆ. ಇಲ್ಲಿ ಯಾರೂ ಆಂತಕಕ್ಕೆ ಒಳಗಾಗುವುದು ಬೇಡ. ಪಕ್ಷ ಸಿದ್ಧಾಂತದ, ನಾಯಕತ್ವದ ಮೇಲೆ ನಂಬಿಕೆ ಇಟ್ಟು ಬರುವಂತಹ ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ” ಎಂದರು.

ದಾವಣಗೆರೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರ ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರದ ಜನಪರ ಕಾರ್ಯಕ್ರಮ, ಶಾಮನೂರು ಶಿವಶಂಕರಪ್ಪ ಅವರು ಈ ಭಾಗಕ್ಕೆ ನೀಡಿರುವ ಕೊಡುಗೆಯಿಂದ ಈ ಭಾಗದ ಜನರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥ್ ಮಲ್ಲಿಕಾರ್ಜುನ ಅವರನ್ನು ಉಪಚುನಾವಣೆಯಲ್ಲಿ ಗೆಲ್ಲಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿಗಳು, ನಾನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆಯುಬ್ ಹಾಗೂ ನಮ್ಮ ಪಕ್ಷದ ಅಭ್ಯರ್ಥಿ ಸಮರ್ಥ್ ಅವರು ಇಂದು ಉಪಚುನಾವಣೆ ನಾಮಪತ್ರ ಸಲ್ಲಿಕೆ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ಎಲ್ಲರನ್ನು ವಿಶ್ವಾಸಕ್ಕೆ ಪಡೆದು, ಒಮ್ಮತದಿಂದ ಸಮರ್ಥ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಿದ್ದರೂ ಗ್ರಾಮೀಣ ಭಾಗದ ಜನರ ಸೇವೆ ಮಾಡಲು ತಮ್ಮದೇ ಆದ ಆಸೆ, ಆಕಾಂಕ್ಷೆಯೊಂದಿಗೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ ಎಂದು ತಿಳಿಸಿದರು.

ಸಮರ್ಥ್ ಅವರು ಮತ್ತೆ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗುವುದನ್ನು ಶಾಮನೂರು ಶಿವಶಂಕರಪ್ಪನವರೇ ಇಲ್ಲೇ ಇದ್ದು ವೃತ್ತಿ ಮಾಡುವಂತೆ ಹೇಳಿದ್ದರು. ಕ್ಷೇತ್ರದ ಜನತೆ, ಎಲ್ಲಾ ವರ್ಗದ ಮುಖಂಡರು, ಪಕ್ಷದ ವರಿಷ್ಠರು ಎಲ್ಲರೂ ಚರ್ಚೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ಈ ಮಧ್ಯೆ ಮುಸಲ್ಮಾನ ಸಮುದಾಯದ ಶಾಸಕರುಗಳು ಈ ಕ್ಷೇತ್ರದಲ್ಲಿ ತಮ್ಮ ಸಮುದಾಯದ ಜನಸಂಖ್ಯೆ ಹೆಚ್ಚಾಗಿದೆ. ನೀವು ನಮಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. ನಾವು ಲೆಕ್ಕಾಚಾರ ಹಾಕಿದೆವು. ಕಾಂಗ್ರೆಸ್ ಪಕ್ಷ ಈ ಹಿಂದೆ ಟಿಕೆಟ್ ನೀಡಲಾಗದ ಕಾರಣಕ್ಕೆ ಜಬ್ಬಾರ್ ಅವರನ್ನು ಮೂರು ಬಾರಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿದ್ದೆವು. ಮುಂದಿನ ದಿನಗಳಲ್ಲಿ ರಾಜ್ಯಸಭೆ, ವಿಧಾನ ಪರಿಷತ್ ಹಾಗೂ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಈ ಸಮಾಜಕ್ಕೆ ನ್ಯಾಯ ಒದಗಿಸಿಕೊಂಡು ಬಂದಿದ್ದೇವೆ. ಇದನ್ನು ಮುಂದುವರಿಸುತ್ತೇವೆ. ಇದು ನಮ್ಮ ಪಕ್ಷದ ಸಿದ್ಧಾಂತ” ಎಂದು ಹೇಳಿದರು.

About the Author

Praja Vahini

Editor

View All Posts

Spread the love

Post navigation

Previous: ಮಧುಮೇಹ ಪಾದ ರೋಗಿಗಗಳ ಪಾಲಿಕೆ ಆಶಾಕಿರಣವಾದ ಹೈಪರ್‌ಬೇರಿಕ್ ಆಮ್ಲಜನಕ ಚಿಕಿತ್ಸೆ
Next: ಉಮೇಶ್ ಮೇಟಿ ಗೆಲುವಿನ ಭರವಸೆ ವ್ಯಕ್ತಪಡಿಸಿದ ಸಿಎಂ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.