ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ಜೊತೆಗೆ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಹಾಗೂ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಸ್ವಾಮಿ ಜತೆಗಿದ್ದರು.
ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು ಉಮೇಶ್ ಮೇಟಿ ಅವರ ಗೆಲುವಿನ ಭರವಸೆ ವ್ಯಕ್ತಪಡಿಸಿದರು.
