ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಗರವನ್ನು ಸ್ವಚ್ಛ, ಸುಂದರ ಹಾಗೂ ನಿಯಮಬದ್ಧವಾಗಿಡುವ ಉದ್ದೇಶದಿಂದ ಸೋಮವಾರ ಮತ್ತು ಮಂಗಳವಾರದಂದು ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ರವರ ನಿರ್ದೇಶನದಂತೆ ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸುವ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಯಿತು.
ಈ ಅಭಿಯಾನದಲ್ಲಿ ವಿವಿಧ ವಿಭಾಗಗಳಲ್ಲಿ ವ್ಯಾಪಕವಾಗಿ ಕಾರ್ಯಾಚರಣೆ ನಡೆಸಿ ಸಾವಿರಾರು ಫ್ಲೆಕ್ಸ್ ಮತ್ತು ಬ್ಯಾನರ್ಗಳನ್ನು ತೆರವುಗೊಳಿಸಲಾಯಿತು.
ಈ ಅಭಿಯಾನವು ನಗರದಲ್ಲಿ ಅನಧಿಕೃತ ಜಾಹೀರಾತುಗಳನ್ನು ನಿಯಂತ್ರಿಸುವುದು, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ನಗರ ಸೌಂದರ್ಯವನ್ನು ಕಾಪಾಡುವುದು ಎಂಬ ಉದ್ದೇಶ ಹೊಂದಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆ ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಿ, ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
