ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ವಿವಿಧ ಸಮುದಾಯಗಳ ಅಭಿವೃದ್ಧಿ ನಿಗಮಗಳು ಆಯೋಜಿಸಿದ್ದ ಸಮಾರಂಭದಲ್ಲಿ “ಸ್ವಾವಲಂಬಿ ಸಾರಥಿ” ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ವಾಹನ ವಿತರಣೆ ಮಾಡಿ, ಸ್ವಂತ ದುಡಿಮೆಯ ಮೂಲಕ ಸದೃಢ ಬದುಕು ಕಟ್ಟಿಕೊಳ್ಳಲೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಶಿವರಾಜ್ ತಂಗಡಗಿ, ಶಾಸಕರಾದ ಅಶೋಕ್ ಪಟ್ಟಣ್, ವಿಜಯಾನಂದ ಕಾಶಪ್ಪನವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
